ಆ್ಯಪಲ್ ಮಳಿಗೆ ಉದ್ಘಾಟಿಸಿ, ಮೋದಿ ಭೇಟಿ ಮಾಡಲಿದ್ದಾರಾ Apple CEO Tim Cook?
Team Udayavani, Apr 12, 2023, 7:40 AM IST
ನವದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಆ್ಯಪಲ್ ಕಂಪನಿ ತನ್ನ ಚಿಲ್ಲರೆ ಮಳಿಗೆಗಳನ್ನು ತೆರೆಯಲಿದೆ. ಸ್ವತಃ ಸಿಇಒ ಟಿಮ್ ಕುಕ್ ಭಾರತಕ್ಕೆ ಬರಲಿದ್ದಾರೆ ಎಂದು ಮೂಲಗಳು ಹೇಳಿವೆ.
ಏ.18ರಂದು ಮುಂಬೈನಲ್ಲಿ, ಏ.20ರಂದು ನವದೆಹಲಿಯಲ್ಲಿ ಕುಕ್ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಈ ನಡುವೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಆ್ಯಪಲ್ ವಿಶ್ವದ ಅತ್ಯಂತ ಜನಪ್ರಿಯ ತಾಂತ್ರಿಕ ಕಂಪನಿಗಳಲ್ಲೊಂದಾಗಿದ್ದರೂ, ಭಾರತದಲ್ಲಿ ಅದರ ಉತ್ಪನ್ನಗಳು ಮಾರಾಟವಾಗುವುದು ಕಡಿಮೆ. ಅದರ ಲ್ಯಾಪ್‌ಟಾಪ್‌ಗಳು , ಮೊಬೈಲ್‌ಗಳು ವಿಪರೀತ ದುಬಾರಿಯಾಗಿರುವುದೇ ಇದಕ್ಕೆ ಕಾರಣ. ಹೀಗಿದ್ದರೂ ಇಲ್ಲಿ ತನ್ನ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುವ ಉದ್ದೇಶ ಅದಕ್ಕಿರುವುದು ಸಹಜ.
2016ರಲ್ಲಿ ಮೊದಲ ಬಾರಿಗೆ ಟಿಮ್ ಕುಕ್ ಭಾರತಕ್ಕೆ ಬಂದಿದ್ದರು. ವಿಶೇಷವೆಂದರೆ ಅದೇ ವೇಳೆ ಆ್ಯಪಲ್‌ನ ಐಫೋನ್‌ಗಳು ಭಾರೀ ಮಾರಾಟ ಕಂಡಿದ್ದವು. ಪ್ರಸ್ತುತ ಅಮೆರಿಕ ಮತ್ತು ಚೀನಾದ ನಡುವೆ ಬಿಗುವಿನ ವಾತಾವರಣವಿದೆ. ಹೀಗಾಗಿ ಚೀನಾ ತನಗೆ ಸುರಕ್ಷಿತ ತಾಣವಲ್ಲ ಎಂದು ಆ್ಯಪಲ್‌ಗೆ ಅನ್ನಿಸಿರುವುದರಿಂದ, ಭಾರತದಲ್ಲಿ ಅದು ವಿಸ್ತರಿಸಿಕೊಳ್ಳಲು ಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.