10 ದಿನಗಳ ಒಳಗೆ ಲೋಕಪಾಲ ನೇಮಕಾತಿ ಮಾಹಿತಿ : ಸುಪ್ರೀಂ ಆದೇಶ
Team Udayavani, Mar 7, 2019, 6:47 AM IST
ಹೊಸದಿಲ್ಲಿ : ಲೋಕಪಾಲ ಸದಸ್ಯರ ನೇಮಕಾತಿಗಾಗಿ ಆಯ್ಕೆ ಸಮಿತಿಯ ಸಭೆ ದಿನಾಂಕವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ಇಂದು ಗುರುವಾರ ಕೇಂದ್ರ ಸರಕಾರಕ್ಕೆ ಹತ್ತು ದಿನಗಳ ಕಾಲಾವಕಾಶ ನೀಡಿತಲ್ಲದೆ ಯಾವುದೇ ಹೆಸರುಗಳನ್ನು ಬಹಿರಂಗಪಡಿಸದಂತೆ ಸೂಚಿಸಿತು.
ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ರಂಜನ ಪ್ರಕಾಶ್ ದೇಸಾಯಿ ನೇತೃತ್ವದ ಆಯ್ಕೆ ಸಮಿತಿಯು ಈಗಾಗಲೇ ಮೂರು ಮಂಡಳಿಗಳಿಗೆ ಹೆಸರುಗಳನ್ನು ಅಂತಿಮಗೊಳಿಸಿದೆ ಎಂದು ಆಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠಕ್ಕೆ ತಿಳಿಸಿದರು.
ಮೂರು ಮಂಡಳಿಗಳ ಪೈಕಿ ಒಂದು ಲೋಕಪಾಲ, ಮತ್ತು ಉಳಿದ ಎರಡರಲ್ಲಿ ಒಂದು ನ್ಯಾಯಾಂಗ ಮತ್ತು ಇನ್ನೊಂದು ನ್ಯಾಯಾಂಗೇತರ ಲೋಕಪಾಲ ಸದಸ್ಯರ ಪಟ್ಟಿಯನ್ನು ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಗೆ ಕೊಡಲಾಗಿದೆ ಎಂದ ಅಟಾರ್ನಿ ಜನರಲ್ ವೇಣುಗೋಪಾಲ್ ಕೋರ್ಟಿಗೆ ತಿಳಿಸಿದರು.
ಲೋಕಪಾಲರ ನೇಮಕಾತಿಯನ್ನು ಆದಷ್ಟು ಬೇಗನೆ ಮಾಡುವುದಕ್ಕಾಗಿ ಆಯ್ಕೆ ಸಮಿತಿಯ ಸಭೆಯನ್ನು ಶೀಘ್ರವೇ ನಡೆಸುವಂತೆ ಸಿಬಂದಿ ಮತ್ತು ತರಬೇತಿ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡುವುದಾಗಿ ಅಟಾರ್ನಿ ಜನರಲ್ ಕೋರ್ಟಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.