ಪುರಾತತ್ವಶಾಸ್ತ್ರಜ್ಞ ,ಪದ್ಮವಿಭೂಷಣ ಶತಾಯುಷಿ ಬಿ ಬಿ ಲಾಲ್ ನಿಧನ
Team Udayavani, Sep 10, 2022, 6:30 PM IST
ನವದೆಹಲಿ: ಪುರಾತತ್ವಶಾಸ್ತ್ರಜ್ಞ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಬಿ ಬಿ ಲಾಲ್ (101) ಅವರು ಶನಿವಾರ ( ಸೆ.10) ನಿಧನರಾಗಿದ್ದಾರೆ.
ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಯ ಮಹಾನಿರ್ದೇಶಕರಾಗಿದ್ದ ಲಾಲ್ ಅವರು, ಅಯೋಧ್ಯೆಯಲ್ಲಿ ನಡೆಸಿದ ಉತ್ಖನನದ ವೇಳೆ ಮಂದಿರದ ಕಂಬಗಳ ಮೇಲೆ ಮಸೀದಿ ನಿರ್ಮಿಸಿರುವುದನ್ನು ಪತ್ತೆ ಹಚ್ಚಿದ್ದರು. ಅವರು ಭಾರತೀಯ ಪುರಾತತ್ವ ಇಲಾಖೆಯ ಅತಿ ಕಿರಿಯ ಮಹಾನಿರ್ದೇಶಕರಲ್ಲಿ ಒಬ್ಬರಾಗಿದ್ದರು. 1968ರಿಂದ 1972ರವರೆಗೆ ಎಎಸ್‌ಐನ ಮಹಾನಿರ್ದೇಶಕರಾಗಿದ್ದರು.2021 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದರು.
ಬಿಬಿ ಲಾಲ್ ಅವರ ನಿಧನಕ್ಕೆ ಟ್ವಿಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಭೂತಕಾಲದೊಂದಿಗೆ ನಮ್ಮ ಸಂಬಂಧವನ್ನು ಗಾಢವಾಗಿಸಿದ ಒಬ್ಬ ಮಹಾನ್ ಬುದ್ಧಿಜೀವಿ ಅವರ ನಿಧನದಿಂದ ನೋವಾಗಿದೆ,’ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮಾತನಾಡಿ, ಬಿಬಿ ಲಾಲ್ ಅವರು ಪುರಾತತ್ತ್ವ ಶಾಸ್ತ್ರದ ಉತ್ಖನನ ಮತ್ತು ಪ್ರಯತ್ನಗಳಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ ಮತ್ತು ನಾಲ್ಕು ದಶಕಗಳಿಂದ ಪುರಾತತ್ವಶಾಸ್ತ್ರಜ್ಞರಿಗೆ ತರಬೇತಿ ನೀಡಿದ್ದಾರೆ.
ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಧಿಕೃತ ಟ್ವಿಟರ್ ನಲ್ಲಿ ಲಾಲ್ ಅವರಿಗೆ ಗೌರವ ಸಲ್ಲಿಸಿದೆ ಮತ್ತು ಅವರು ಹೋದರೂ ಅವರ ಕೆಲಸಗಳು ಜೀವಂತವಾಗಿದೆ.
ಲಾಲ್ 1921 ರಲ್ಲಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಜನಿಸಿದರು. ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ, ಅವರು ಪುರಾತತ್ತ್ವ ಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು.
ಬಿಬಿ ಲಾಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Shri BB Lal was an outstanding personality. His contributions to culture and archaeology are unparalleled. He will be remembered as a great intellectual who deepened our connect with our rich past. Pained by his demise. My thoughts are with his family and friends. Om Shanti. pic.twitter.com/eA3MlNI27Q
— Narendra Modi (@narendramodi) September 10, 2022
In the passing of Prof BB Lal Ji, we have lost one of the brightest minds who has contributed significantly towards our archeological excavations & endeavours and trained archeologists for over 4 decades.
My thoughts and prayers are with the bereaved family.
Om Shanti. pic.twitter.com/sZlvBCMCLq
— G Kishan Reddy (@kishanreddybjp) September 10, 2022
The contribution of Padma Vibhushan Prof BB Lal in Archaeology is beyond measure. A doyen in his field, he devoted his entire 101-year life to the subject. He may be gone but his work lives on & will continue to teach & influence generations to come. Our homage to the great soul. pic.twitter.com/gwX1iUGrMV
— Archaeological Survey of India (@ASIGoI) September 10, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.