ಸಿರ್ಸಾ : ಅತ್ಯಾಚಾರಿ ಡೇರಾ ಬಾಬಾ ಆಶ್ರಮಕ್ಕೆ ಸೇನೆ ಮುತ್ತಿಗೆ
Team Udayavani, Aug 26, 2017, 12:41 PM IST
ಸಿರ್ಸಾ: ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ ಜೈಲು ಸೇರಿರುವ ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್‌ನ ಆಶ್ರಮಕ್ಕೆ ಶನಿವಾರ ಸೇನೆ ಮುತ್ತಿಗೆ ಹಾಕಿದೆ.
ಸಿರ್ಸಾದಲ್ಲಿರುವ ಆಶ್ರಮಕ್ಕೆ ಸಾವಿರಾರು ಸಿಆರ್‌ಪಿಎಫ್ ಪಡೆಯ ಯೋಧರು ಮುತ್ತಿಗೆ ಹಾಕಿದ್ದು , ಆಶ್ರಮದ ಒಳಗಿದ್ದ ಬಾಬಾ ಭಕ್ತರನ್ನು ಸ್ಥಳದಿಂದ ತೆರವು ಮಾಡಿದ್ದಾರೆ.
ಸೈನಿಕರ ಮೇಲೂ ಕಲ್ಲು
ಸೈನಿಕರು ಆಶ್ರಮಕ್ಕೆ ಮುತ್ತಿಗೆ ಹಾಕುವ ವೇಳೆ ಉದ್ರಿಕ್ತ ಭಕ್ತರು ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.
ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ಬಾಬಾ ದೋಷಿ ಎಂದು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದು 32ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.
8 ಮಂದಿ ವಿರುದ್ಧ ದೇಶದ್ರೋಹ ಪ್ರಕರಣ
ಬಬಾ ಬಂಧನಕ್ಕೆ ತೀವ್ರ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಬಾಬಾನ 6 ಮಂದಿ ಖಾಸಗಿ ಅಂಗರಕ್ಷಕರು , ಇಬ್ಬರು ಭಕ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದೇ ವೇಳೆ ಶನಿವಾರ ಸಿರ್ಸಾ ಆಶ್ರಮದಲ್ಲಿ 15 ಮಂದಿ ಪುಂಡ ಭಕ್ತರನ್ನು ಬಂಧಿಸಿ ಜೈಲಿಗಟ್ಟಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
MUST WATCH
ಹೊಸ ಸೇರ್ಪಡೆ
Sullia: ಹೋರಿ ಎರಗಿ ವ್ಯಕ್ತಿಗೆ ಗಾಯ
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.