Encounter: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಸೇನಾ ಕ್ಯಾಪ್ಟನ್ ಹುತಾತ್ಮ, ಶಸ್ತ್ರಾಸ್ತ ವಶ
Team Udayavani, Aug 14, 2024, 3:50 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ (ಆಗಸ್ಟ್ 14) ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಸೇನಾ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ. ಭಯೋತ್ಪಾದಕರ ಕಾರ್ಯಾಚರಣೆ ವೇಳೆ ನಡೆಸಿದ ದಾಳಿಯಲ್ಲಿ ಕ್ಯಾಪ್ಟನ್ ದೀಪಕ್ ಸಿಂಗ್ ವೀರ ಮರಣವನ್ನಪ್ಪಿದ್ದಾರೆ.
ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ವರದಿ ಆಧರಿಸಿ ಸೇನೆಯು ಸ್ಥಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸೇನೆಯೂ ಪ್ರತಿದಾಳಿ ನಡೆಸಿದೆ ಈ ವೇಳೆ ಕ್ಯಾಪ್ಟನ್ ದೀಪಕ್ ಸಿಂಗ್ ಅವರಿಗೆ ಗುಂಡು ತಗುಲಿ ಗಂಭೀರ ಗಾಯಗೊಂಡು ವೀರ ಮರಣ ಹೊಂದಿದ್ದಾರೆ. ವರದಿಗಳ ಪ್ರಕಾರ, ನಾಲ್ಕು ಶಂಕಿತ ಭಯೋತ್ಪಾದಕರ ಗುಂಪು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿತು. ಈ ವೇಳೆ ಸ್ಥಳೀಯ ನಿವಾಸಿಯೊಬ್ಬರೂ ಗಾಯಗೊಂಡಿದ್ದಾರೆ.
ದೋಡಾ ಜಿಲ್ಲೆಯ ಅರಣ್ಯದಲ್ಲಿ ಅಡಗಿರುವ ಭಯೋತ್ಪಾದಕರ ಹುಡುಕಾಟ ಮುಂದುವರೆದಿದ್ದು ಈ ವೇಳೆ ಅರಣ್ಯದಲ್ಲಿ ಅಮೆರಿಕ ನಿರ್ಮಿತ M4 ರೈಫಲ್ ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ಸೇನೆಯು ವಶಪಡಿಸಿಕೊಂಡಿದೆ.
All Ranks of #WhiteKnightCorps salute the supreme #sacrifice of #Braveheart Capt Deepak Singh who succumbed to his injuries.#WhiteKnightCorps offers deepest condolences and stands firm with the bereaved family in this hour of grief.@adgpi@NorthernComd_IA pic.twitter.com/kc6SIczb3S
— White Knight Corps (@Whiteknight_IA) August 14, 2024
ಅಧಿಕಾರಿಗಳ ಸಭೆ
ಇದೀಗ ಸ್ವಾತಂತ್ರ್ಯ ದಿನಾಚರಣೆಯ ಒಂದು ದಿನ ಮೊದಲು ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ ನಡೆದು ಕ್ಯಾಪ್ಟನ್ ಹುತಾತ್ಮರಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಿಸಲು ರಕ್ಷಣಾ ಸಚಿವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಯಿತು. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕಾಶ್ಮೀರದ ಅರಣ್ಯ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಗುಪ್ತಚರ ಇಲಾಖೆ ಈ ಹಿಂದೆ ವರದಿ ನೀಡಿತ್ತು. ಇದರ ಬೆನ್ನಲ್ಲೇ ಕಳೆದ ಕೆಲ ದಿನಗಳಿಂದ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಇತ್ತೀಚೆಗಷ್ಟೇ ಕಾಶ್ಮೀರದ ಕೋಕರ್ನಾಗ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಮತ್ತು ಸ್ಥಳೀಯ ನಿವಾಸಿಯೊಬ್ಬರು ಹತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.