ಚೀನ ಗಡಿ ಬೆದರಿಕೆ : ಭೂತಾನ್‌ಗೆ ರಾವತ್‌, ದೋವಾಲ್‌ ರಹಸ್ಯ ಭೇಟಿ

Team Udayavani, Feb 19, 2018, 3:35 PM IST

Bipin-Rawat-700.jpg

ಹೊಸದಿಲ್ಲಿ : ಸಿಕ್ಕಿಂ ಗಡಿ ಪ್ರದೇಶದಲ್ಲಿನ ವಿವಾದಿತ ಡೋಕ್ಲಾಂ ನಲ್ಲಿ ಚೀನ ಸೇನೆ ಮತ್ತೆ ತನ್ನ ರಟ್ಟೆಯರಳಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಭಾರತದ ಸೇನಾ ಪಡೆಯ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌, ವಿದೇಶ ಕಾರ್ಯದರ್ಶಿ ವಿಜಯ್‌ ಗೋಖಲೆ ಮತ್ತು ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್‌ ದೋವಾಲ್‌ ಅವರು ಜತೆಗೂಡಿ ಈ ತಿಂಗಳ ಆದಿಯಲ್ಲಿ ರಹಸ್ಯವಾಗಿ ಭೂತಾನ್‌ಗೆ ಭೇಟಿ ನೀಡಿ ಅಲ್ಲಿನ ಉನ್ನತ ನಾಯಕರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ಅನೇಕ ಪ್ರಮುಖ ಮತ್ತು ವ್ಯೂಹಾತ್ಮಕ ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ಈಗ ಗೊತ್ತಾಗಿದೆ.

ರಾಯಲ್‌ ಭೂತಾನ್‌ ಆರ್ಮಿ ವಶದಲ್ಲಿರುವ ಪ್ರದೇಶಗಳಲ್ಲಿ ಚೀನದ ಪೀಪಲ್ಸ್‌ ಲಿಬರೇಶನ್‌ ಆರ್ಮಿ (ಪಿಎಲ್‌ಎ) ಅತಿಕ್ರಮಣ ಗಸ್ತು ತಿರುಗುತ್ತಿರುವ ಬಗ್ಗೆ ಗುಪ್ತಚರ ದಳ ಎಚ್ಚರಿಕೆ ನೀಡಿದ್ದು ಈ ಬಗ್ಗೆ ಭಾರತ ಚಿಂತಾಕ್ರಾಂತವಾಗಿದೆ ಎಂದು ಮೂಲಗಳು ಹೇಳಿವೆ.

ರಾಯಲ್‌ ಭೂತಾನ್‌ ಆರ್ಮಿಯ ವಶದಲ್ಲಿರುವ ಲ್ಹಾರಿಯೋಂಗ್‌, ಸಾರಿತಾಂಗ್‌, ಸಿಂಚುಲುಂಪಾ ಮತ್ತು ಪಾಂಗ್‌ಕಾ ಲಾ ಪ್ರದೇಶಗಳಲ್ಲಿ ಚೀನೀ ಸೇಯ ಅತಿಕ್ರಮಣದ ಗಸ್ತು  ತಿರುಗುವಿಕೆ ಈಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ಉಭಯ ದೇಶಗಳಿಗೆ ಕಳವಳದ ಸಂಗತಿಯಾಗಿದೆ. 

ರಾಯಲ್‌ ಭೂತಾನ್‌ ಆರ್ಮಿಯ ಈ ಪ್ರದೇಶಗಳಲ್ಲಿ ಮಾತ್ರವಲ್ಲದೆ ವಿವಾದಿತ ಉತ್ತರ ಡೋಕ್ಲಾಂ ನಲ್ಲಿ ಚೀನೀ ಸೇನೆ ಫೈಟರ್‌ ಜೆಟ್‌ಗಳನ್ನು ಮತ್ತು ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡು ದಿನವಹಿ ನೆಲೆಯಲ್ಲಿ ಅತಿಕ್ರಮಣ ಗಸ್ತು ನಡೆಸುತ್ತಿದೆ ಎಂದು ಗುಪ್ತಚರ ವರದಿಗಳು ತಿಳಿಸಿವೆ.

ಭಾರತ – ಚೀನ ಸೇನೆ 2017ರ ಜೂನ್‌ 16ರಿಂದ ತೊಡಗಿ 73 ದಿನಗಳ ಕಾಲ ಮುಖಾಮುಖೀಯಾಗಿದ್ದ ಡೋಕ್ಲಾಂ ಟ್ರೈ ಜಂಕ್ಷನ್‌ ಪ್ರದೇಶದಲ್ಲಿ ಚೀನೀ ಸೇನೆ ಮತ್ತು ತನ್ನ ರಟ್ಟೆಯನ್ನರಳಿಸುತ್ತಿದೆ. ಅಂದು ಈ ವಿವಾದಿತ ಪ್ರದೇಶದಲ್ಲಿ ಚೀನ ಸೇನೆ ನಡೆಸುತ್ತಿದ್ದ ರಸ್ತೆ ಕಾಮಗಾರಿಯನ್ನು ಭಾರತ ಸೇನೆ ಪಟ್ಟು ಹಿಡಿದು ತಡೆದಿತ್ತು. 

ಉತ್ತರ ಡೋಕ್ಲಾಂ ನಲ್ಲಿ ನ ಮುಕ್ತ ಸಂಪರ್ಕದ ಆಳದ ಕಂದಕದ ಉದ್ದಕ್ಕೂ ಪಿಎಲ್‌ಎ 25 ಸಣ್ಣ – ಮಧ್ಯ ಗಾತ್ರದ ಟೆಂಟ್‌ಗಳನ್ನು ನಿರ್ಮಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.