Army Dog: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದ ಶ್ವಾನ ʼಫ್ಯಾಂಟಮ್ʼ
Team Udayavani, Oct 29, 2024, 10:27 AM IST
ಶ್ರೀನಗರ: ಸೋಮವಾರ(ಅ.28) ಬೆಳಿಗ್ಗೆ ಜಮ್ಮು ಕಾಶ್ಮೀರದ ಅಖ್ನೂರ್‌ನ ಸುಂದರ್‌ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ ವೀರ ಮರಣವನ್ನಪ್ಪಿದೆ.
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ತೀವ್ರಗೊಂಡಿದ್ದು ಇದರ ಹಿನ್ನೆಲೆಯಲ್ಲಿ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಸೋಮವಾರ ಬೆಳಿಗ್ಗೆ ಮುಂದಾಗಿದೆ. ಅದರಂತೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಸೇನಾ ಪಡೆಯ ಶ್ವಾನ ‘ಫ್ಯಾಂಟಮ್’ ಗೆ ಗಂಭೀರ ಗಾಯವಾಗಿತ್ತು ಕೂಡಲೇ ಶ್ವಾನಕ್ಕೆ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಫ್ಯಾಂಟಮ್ ಬೆಲ್ಜಿಯನ್ ಮಾಲಿನೋಯಿಸ್ ತಳಿಗೆ ಸೇರಿದ ಶ್ವಾನವಾಗಿದ್ದು, 2020ರ ಮೇ ತಿಂಗಳಲ್ಲಿ ಜನಿಸಿತ್ತು. ಬಳಿಕ 2022ರಲ್ಲಿ ಸೇನೆಗೆ ಸೇರ್ಪಡೆಗೊಂಡಿತ್ತು ಅಲ್ಲದೆ ಶ್ವಾನ K9 ಘಟಕದ ಭಾಗವಾಗಿತ್ತು, ಭಯೋತ್ಪಾದನೆ-ವಿರೋಧಿ ಕಾರ್ಯಾಚರಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು ಪ್ಯಾಂಟಮ್ ಅಗಲಿಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ ಅದರ ಧೈರ್ಯ, ನಿಷ್ಠೆ ಮತ್ತು ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ವೈಟ್ ನೈಟ್ ಕಾರ್ಪ್ಸ್ ಟ್ವೀಟ್ ಮಾಡಿದೆ.
Update
We salute the supreme sacrifice of our true hero—a valiant #IndianArmy Dog, #Phantom.
As our troops were closing in on the trapped terrorists, #Phantom drew enemy fire, sustaining fatal injuries. His courage, loyalty, and dedication will never be forgotten.
In the… pic.twitter.com/XhTQtFQFJg
— White Knight Corps (@Whiteknight_IA) October 28, 2024
ಅಗಲಿದ ಶ್ವಾನಕ್ಕೆ ಸೇನೆಯ ವೈಟ್ ನೈಟ್ ಕಾರ್ಪ್ಸ್ ವಂದನೆ ಸಲ್ಲಿಸಿ ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.