ಶ್ರೀನಗರ ವಿಮಾನ ನಿಲ್ದಾಣದಲ್ಲಿ ಗ್ರೆನೇಡ್ ಒಯ್ಯುತ್ತಿದ್ದ ಸೈನಿಕ ಸೆರೆ
Team Udayavani, Apr 3, 2017, 12:18 PM IST
ಶ್ರೀನಗರ : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಜಮ್ಮು ಕಾಶ್ಮೀರ ಪೊಲೀಸರು ಸೈನಿಕನೊಬ್ಬನನ್ನು ಬಂಧಿಸಿದ್ದಾರೆ. ಎಕ್ಸ್ರೇ ತಪಾಸಣೆ ವೇಲೆ ಆತನ ಲಗ್ಗೇಜ್ ಒಳಗೆ ಎರಡು ಗ್ರೆನೇಡ್ಗಳು ಪತ್ತೆಯಾಗಿರುವುದೇ ಆತನ ಬಂಧನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಸೈನಿಕನನ್ನು ಭೋಪಾಲ್ ಮುಖೀಯಾ ಎಂದು ಗುರುತಿಸಲಾಗಿದೆ. ಜಮ್ಮು ಕಾಶ್ಮೀರ ರೈಫಲ್ಸ್ ಪಡೆಗೆ ಸೇರಿರುವ ಈತನನ್ನು ಉರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆತ ವಿಮಾನ ಮೂಲಕ ದಿಲ್ಲಿಗೆ ಹೊರಟಿದ್ದ ವೇಳೆ ನಡೆದ ತಪಾಸಣೆಯಲ್ಲಿ ಆತನ ಬ್ಯಾಗ್ ಒಳಗೆ ಎರಡು ಗ್ರೆನೇಡ್ಗಳು ಪತ್ತೆಯಾದವು. ಬಂಧಿಸಲ್ಪಟ್ಟಿಟರುವ ಆತನನ್ನು ಈಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಶ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
17 ಜಮ್ಮು ಕಾಶ್ಮೀರ ರೈಫಲ್ಸ್ಗೆ ಸೇರಿರುವ ಈ ಸೈನಿಕನು ಮೂಲತಃ ಡಾರ್ಜಿಲಿಂಗ್ನವನು. ಹೊಳೆಯಲ್ಲಿ ಸ್ಫೋಟ ನಡೆಸಿ ಮೀನು ಹಿಡಿಯುವುದಕ್ಕಾಗಿ ತಾನು ಗ್ರೆನೇಡ್ಗಳನ್ನು ಒಯ್ಯುತ್ತಿದ್ದೆ ಎಂದಾತ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.