![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 30, 2023, 3:56 PM IST
ಕುಪ್ವಾರ: ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೆ 30 ರಂದು ಕುಪ್ವಾರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ವರದಿಗಳ ಪ್ರಕಾರ, ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಒಳನುಸುಳುವಿಕೆ ಯತ್ನ ನಡೆದಿದ್ದು, ಎನ್‌ಕೌಂಟರ್ ಇನ್ನೂ ಮುಂದುವರಿದಿದೆ.
“ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇದುವರೆಗೆ ಒಳನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ” ಎಂದು ಕುಪ್ವಾರ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.