ಸೇನಾ ಪ್ರಶ್ನೆಪತ್ರಿಕೆ ಸೋರಿಕೆ: 18 ಮಂದಿ ಬಂಧನ
Team Udayavani, Feb 27, 2017, 10:19 AM IST
ಠಾಣೆ/ನವದೆಹಲಿ: ಸೇನಾ ನೇಮಕ ಮಂಡಳಿ ಆಯೋಜಿಸಿದ್ದ ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಠಾಣೆ, ನಾಸಿಕ್, ನಾಗ್ಪುರ ಮತ್ತು ಗೋವಾದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕ, ಅರೆ ಸೇನಾಪಡೆ ಸಿಬ್ಬಂದಿ ಸೇರಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ರಾತ್ರಿ ಈ ಕಾರ್ಯಾಚರಣೆ ನಡೆದಿದೆ. ಬೆಂಗಳೂರು ಸೇರಿದಂತೆ ದೇಶದ ಉಳಿದ ಭಾಗಗಳಲ್ಲಿ ಪ್ರವೇಶ ಪರೀಕ್ಷೆ ಆತಂಕವಿಲ್ಲದೆ ಮುಕ್ತಾಯವಾಗಿದೆ. ಅಹಮದಾಬಾದ್, ನಾಗ್ಪುರ್, ಅಹ್ಮದನಗರ, ಗೋವಾ, ಸೇರಿ 6 ಕೇಂದ್ರಗಳಲ್ಲಿ ಪರೀಕ್ಷೆ ರದ್ದಾಗಿವೆ. ವಿದ್ಯಾರ್ಥಿಗಳು ಪ್ರತಿ ಪ್ರಶ್ನೆ ಪತ್ರಿಕೆಗೆ 4 ರಿಂದ 5 ಲಕ್ಷ ರೂ. ನೀಡಿದ್ದಾರೆ. ಅವರಿಗೆ ವಾಟ್ಸ್ ಆ್ಯಪ್ ಮೂಲಕ ಪ್ರಶ್ನೆ ಪತ್ರಿಕೆ ಕಳುಹಿಸಲಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ಗಳಲ್ಲಿ ಹಾಗೂ ಇತರೆ ಗೌಪ್ಯ
ಸ್ಥಳಗಳಲ್ಲಿ ಉತ್ತರ ಬರೆಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಪ್ರಶ್ನೆಪತ್ರಿಕೆ ಸೋರಿಕೆಯ ಮೂಲದ ಪತ್ತೆಗಾಗಿ ಯತ್ನಿಸುತ್ತಿದ್ದು, ತನಿಖೆ ಮುಂದುವರಿದಿದೆ. ಅಕ್ರಮದ ಬಗ್ಗೆ ಠಾಣೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಅವರು ದಾಳಿ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್