ಆರೆಸ್ಸೆಸ್‌ನಿಂದ ಸೈನಿಕ ಶಾಲೆ ಶೀಘ್ರ ಆರಂಭ

ಉತ್ತರ ಪ್ರದೇಶದಲ್ಲಿ ಬೃಹತ್‌ ಶಿಕ್ಷಣ ಸಂಸ್ಥೆ

Team Udayavani, Jul 30, 2019, 5:00 AM IST

a-28

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಸೇನೆಗೆ ಸೇರುವುದಕ್ಕಾಗಿ ಮಕ್ಕಳನ್ನು ಸಿದ್ಧಗೊಳಿಸುವ ಉದ್ದೇಶದಿಂದ ಸೇನಾ ಶಾಲೆಯನ್ನು ತೆರೆಯಲು ನಿರ್ಧರಿಸಿದೆ. ಮುಂದಿನ ವರ್ಷದಿಂದ ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯ ಶಿಕರ್‌ಪುರದಲ್ಲಿ ಆರಂಭವಾಗಲಿದೆ. ಆರೆಸ್ಸೆಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿ ಇದರ ನಿರ್ವಹಣೆ ಮಾಡಲಿದೆ. ಆರೆಸ್ಸೆಸ್‌ ಸರಸಂಘಚಾಲಕರಾಗಿದ್ದ ರಾಜೇಂದ್ರ ಸಿಂಗ್‌ ಸ್ಮರಣಾರ್ಥ ಈ ಶಾಲೆ ತೆರೆಯಲಾಗಿದೆ.

ಈಗಾಗಲೇ ಶಾಲೆಯ ಕಟ್ಟಡ ನಿರ್ಮಾಣ ಆರಂಭವಾಗಿದ್ದು, ಮುಂದಿನ ವರ್ಷದಿಂದ ಸಿಬಿಎಸ್‌ಇ ಪಠ್ಯಕ್ರಮದಂತೆ ಬೋಧನೆ ಆರಂಭಿಸಲಾಗುತ್ತದೆ. ಆರಂಭದಲ್ಲಿ ಆರನೇ ತರಗತಿಯಿಂದ ಹನ್ನೆರಡನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮುಂದಿನ ಏಪ್ರಿಲ್ನಿಂದ ತರಗತಿಗಳು ಆರಂಭವಾಗಲಿವೆ.

ಹುತಾತ್ಮರ ಮಕ್ಕಳಿಗೆ 56 ಸೀಟು: ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳ ಪ್ರಾಸ್ಪೆಕ್ಟಸ್‌ ಈಗಾಗಲೇ ಸಿದ್ಧವಿದೆ. ಮುಂದಿನ ತಿಂಗಳು ಅರ್ಜಿ ಕರೆಯಲಾಗುತ್ತದೆ. ಆರನೇ ತರಗತಿಯ ಮೊದಲ ಬ್ಯಾಚ್ಗೆ 160 ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ. ಈ ಪೈಕಿ ಹುತಾತ್ಮರ ಮಕ್ಕಳಿಗಾಗಿ 56 ಸೀಟ್‌ಗಳನ್ನು ಕಾಯ್ದಿರಿಸಲಾಗುತ್ತದೆ.

ಇದೊಂದು ಪ್ರಯೋಗ. ದೇಶದಲ್ಲಿ ಇದೇ ಮೊದಲ ಬಾರಿಗೆ ಇಂಥ ಶಾಲೆಯನ್ನು ಆರಂಭಿಸಲಾಗಿದೆ. ಭವಿಷ್ಯದಲ್ಲಿ ಈ ಮಾದರಿಯನ್ನು ಇತರ ಸ್ಥಳಗಳಲ್ಲೂ ಜಾರಿಗೊಳಿಸಬಹುದು ಎಂದು ವಿದ್ಯಾ ಭಾರತಿ ಯಚ್ಛ ಶಿಕ್ಷಾ ಸಂಸ್ಥಾನದ ಉತ್ತರಾಖಂಡ ಮತ್ತು ಪಶ್ಚಿಮ ಉ.ಪ್ರ ವಿಭಾಗದ ಸಂಯೋಜಕ ಅಜಯ್‌ ಗೋಯಲ್ ಹೇಳಿದ್ದಾರೆ. ವಿದ್ಯಾ ಭಾರತಿ ದೇಶಾದ್ಯಂತ 20 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ನಿರ್ವಹಿಸುತ್ತಿದೆ.

ದೇಶದಲ್ಲಿ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಕೊರತೆಯಿದೆ. ಶಾಲಾ ಮಟ್ಟದಲ್ಲೇ ಸೇನಾ ಶಿಕ್ಷಣವನ್ನು ಒದಗಿಸಬೇಕು ಎಂದು ಆರೆಸ್ಸೆಸ್‌ ಭಾವಿಸಿದೆ. ಆರೆಸ್ಸೆಸ್‌ನ ಸಂಸ್ಥಾಪಕರಾದ ಕೆ.ಬಿ ಹೆಡ್ಗೆವಾರ್‌ರ ಮಾರ್ಗದರ್ಶಕರಾಗಿದ್ದ ಬಿಎಸ್‌ ಮೂಂಜೆ ನಾಶಿಕದಲ್ಲಿ 1937ರಲ್ಲಿ ಸೇನಾ ಶಾಲೆಯನ್ನು ಸ್ಥಾಪಿಸಿದ್ದರು. ಅದು ಇಂದಿಗೂ ಚಾಲ್ತಿಯಲ್ಲಿದೆ.ಆದರೆ ಆರೆಸ್ಸೆಸ್‌ ಇದೇ ಮೊದಲ ಬಾರಿಗೆ ಇಂಥ ಶಾಲೆಯನ್ನು ಸ್ಥಾಪಿಸುತ್ತಿದೆ.

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!

Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.