ಆರೋಗ್ಯ ಸೇತು ಆ್ಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ: ಸರ್ಕಾರ
Team Udayavani, Oct 29, 2020, 9:42 AM IST
ಹೊಸದಿಲ್ಲಿ: ಆರೋಗ್ಯ ಸೇತು ಅಪ್ಲಿಕೇಶನ್ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಅತ್ಯಂತ ಪಾರದರ್ಶಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಕೋವಿಡ್ ಕಾಲದಲ್ಲಿ ಹೆಚ್ಚು ಬಳಕೆಯಾದ ಆರೋಗ್ಯ ಸೇತು ಆ್ಯಪ್ ಅಭಿವೃದ್ದಿಪಡಿಸಿದ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸರ್ಕಾರ ಈ ಸ್ಪಷ್ಟನೆ ನೀಡಿದೆ.
ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌ಐಸಿ) ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಸ್ವಯಂಸೇವಕರ ಜೊತೆ ಸೇರಿಕೊಂಡು ಆರೋಗ್ಯ ಸೇತು ಆಪ್ ನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಸಂಪೂರ್ಣ ಸುರಕ್ಷಿತವಾಗಿದೆ ಮತ್ತು ಅತ್ಯಂತ ಪಾರದರ್ಶಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ವರದಿ ನೀಡಿದೆ.
ಇದನ್ನೂ ಓದಿ:ಆರೋಗ್ಯ ಸೇತು ಆ್ಯಪ್ ಅಭಿವೃದ್ಧಿಪಡಿಸಿದ್ಯಾರು?
ಆ್ಯಪ್ ಅಭಿವೃದ್ಧಿಪಡಿಸಿದ್ದು ಯಾರು, ಅದರ ಕಡತಗಳು ಎಲ್ಲಿವೆ, ಆ್ಯಪ್ ಅನುಮತಿ ವಿವರಗಳು, ಒಳಗೊಂಡಿರುವ ಕಂಪನಿಗಳು, ವ್ಯಕ್ತಿಗಳು, ಸರ್ಕಾರಿ ಇಲಾಖೆಗಳ ಬಗ್ಗೆ ಮಾಹಿತಿ ಕೋರಿ ಆರ್‌ಟಿಐನಡಿ ಸೌರವ್ ದಾಸ್ ಎಂಬವರು ಅರ್ಜಿ ಸಲ್ಲಿಸಿದ್ದರು.
ಆದರೆ, ಮಾಹಿತಿ ನೀಡಲು ಸಂಬಂಧಪಟ್ಟ ಪ್ರಾಧಿಕಾರ ನಿರಾಕರಿಸಿತ್ತು. ಇದರಿಂದ ಕೆಂಡಾಮಂಡಲವಾದ ರಾಷ್ಟ್ರೀಯ ಮಾಹಿತಿ ಆಯೋಗ, ಯಾವುದೇ ಪ್ರಾಧಿಕಾರ ಮಾಹಿತಿ ನೀಡದೇ ಸತಾಯಿಸುವುದನ್ನು ಒಪ್ಪಲಾಗದು. ನ.24ರಂದು ಸಂಬಂಧಪಟ್ಟ ಇಲಾಖೆ ಹಾಜರಾಗಿ ವಿವರಣೆ ನೀಡಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.