ಕಾಬೂಲ್ ನಿಂದ ದೆಹಲಿಗೆ ಇಂದು 180 ಮಂದಿ ಏರ್ ಲಿಫ್ಟ್..!
Team Udayavani, Aug 26, 2021, 10:43 AM IST
ನವ ದೆಹಲಿ : ಆಗಸ್ಟ್ 31 ರ ಗಡುವುಗಿಂತ ಮುಂಚಿತವಾಗಿ ಹಲವಾರು ದೇಶಗಳು ತಮ್ಮ ನಾಗರಿಕರನ್ನು ಸ್ಥಳಾಂತರಿಸಲು ಹರಸಾಹಸ ಪಡುತ್ತಿರುವ ನಡುವೆ ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ಸುತ್ತಮುತ್ತ ಇರುವ ಸುಮಾರು 180 ಜನರನ್ನು ಇಂದು(ಗುರುವಾರ, ಆಗಸ್ಟ್ 26) ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ ಎಂದು ಬಲ್ಲ ಮೂಲಗಳು ತಿಳಿಸಿರುವುದಾಗಿ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಫ್ಗಾನಿಸ್ತಾನದಲ್ಲಿರುವ ಸಿಖ್ ಹಾಗೂ ಹಿಂದೂ ಧರ್ಮದವರನ್ನು ಒಳಗೊಂಡು, ಮೂಲ ಭಾರತೀಯರನ್ನು ಭಾರತೀಯ ಮಿಲಿಟರಿ ವಿಮಾನ ಇಂದು ಸುಮಾರು 180 ಮಂದಿಯನ್ನು ಕಾಬೂಲ್ ನಿಂದ ದೆಹಲಿ ತಂದು ಇಳಿಸಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 46,164 ಕೋವಿಡ್ ಪ್ರಕರಣ ಪತ್ತೆ, ಶೇ.22.7ರಷ್ಟು ಏರಿಕೆ
ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮತ್ತು ಅಶ್ರಫ್ ಘನಿ ಸರ್ಕಾರ ಪತನಗೊಂಡ ನಂತರ, ಭಾರತವು ಈವರೆಗೆ ‘ಆಪರೇಷನ್ ದೇವಿ ಶಕ್ತಿ’ ಕಾರ್ಯಾಚರಣೆಯ ಭಾಗವಾಗಿ 800 ಜನರನ್ನು ಈಗಾಗಲೇ ಸ್ಥಳಾಂತರಿಸಿದೆ.
ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಆಳ್ವಿಕೆ ಮತ್ತೆ ಬಂದ ನಂತರ ಸಾವಿರಾರು ಅಫ್ಘನ್ನರು ದೇಶದಿಂದ ಹೊರಬರಲು ಪ್ರಯತ್ನಿಸುತ್ತಿದ್ದು, ಕಾಬೂಲ್ ವಿಮಾನ ನಿಲ್ದಾಣ ಸಾವಿರಾರು ಮಂದಿಯಿಂದ ಕಿಕ್ಕಿರಿದು ತುಂಬಿವೆ ಎಂದು ವರದಿ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ, ಅಫ್ಗಾನ್ ರಾಜಧಾನಿ ಹಾಗೂ ಅಫ್ಗಾನ್ ನ ಇತರ ಭಾಗಗಳಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವುದನ್ನು ಗಮನದಲ್ಲಿಟ್ಟುಕೊಂಡು ಭಾರತ ತನ್ನ ನಾಗರಿಕರನ್ನು ಹಾಗೂ ಕಾಬೂಲ್ ನಿಂದ ಸ್ಥಳಾಂತರಿಸುವ ಪ್ರಯತ್ನದಲ್ಲಿದೆ.
ಇದನ್ನೂ ಓದಿ : 1 ರಿಂದ 8ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ. 30ರಂದು ನಿರ್ಧಾರ: ಬಿ.ಸಿ. ನಾಗೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.