ಶಶಿ ತರೂರ್ ವಾರಂಟ್ ಗೊಂದಲ
Team Udayavani, Dec 23, 2019, 12:54 AM IST
ತಿರುವನಂತಪುರ: ಕಾಂಗ್ರೆಸ್ ಸಂಸದ, ಖ್ಯಾತ ಲೇಖಕ ಶಶಿ ತರೂರ್ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂಬ ಮಾಧ್ಯಮ ವರದಿ ಗೊಂದಲ ಸೃಷ್ಟಿಸಿದೆ. ಸ್ವತಃ ಶಶಿ ತರೂರ್ ಈ ಬಗ್ಗೆ ಪ್ರತಿಕ್ರಿಯಿಸಿ, ನಿರ್ದಿಷ್ಟ ಸ್ಥಳೀಯ ನ್ಯಾಯಾಲಯಕ್ಕೆ ಈ ಬಗ್ಗೆ ಸ್ಪಷ್ಟನೆ ಕೇಳಲಾಗುವುದೆಂದು ತಿಳಿಸಿದ್ದಾರೆ. ತರೂರ್ ಬರೆದ ದಿ ಗ್ರೇಟ್ ಇಂಡಿಯನ್ ನಾವೆಲ್ ಕಾದಂಬರಿ 1989ರಲ್ಲಿ ಪ್ರಕಟವಾಗಿತ್ತು.
ಅದರಲ್ಲಿ ನಾಯರ್ ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಕೇರಳ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಸಂಧ್ಯಾ, ಈ ವರ್ಷ ಎಪ್ರಿಲ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಿ.21ರೊಳಗೆ ಹಾಜರಾಗಬೇಕು ಎಂಬ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲಾಗಿದೆ, ಆದ್ದರಿಂದ ಬಂಧನಕ್ಕೆ ಸೂಚಿಸಲಾಗಿದೆಯೆಂದು ವರದಿಯಾಗಿದೆ. ಆದರೆ ತನಗೆ ನೀಡಿರುವ ಸಮನ್ಸ್‌ನಲ್ಲಿ ಯಾವ ದಿನಾಂಕವೆಂದು ಸೂಚಿಸಿಯೇ ಇಲ್ಲವೆಂದು ತರೂರ್ ತಿಳಿಸಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.