ದೆಹಲಿ ಪ್ರಾಧಿಕಾರದ ಮೇಲೆ ಕೆಂಡಕಾರಿದ ಎನ್‌ಜಿಟಿ
Team Udayavani, May 12, 2017, 1:10 AM IST
ಹೊಸದಿಲ್ಲಿ: ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಯಮುನಾ ನದಿ ದಂಡೆ ಮೇಲೆ ಆಯೋಜಿಸಿದ್ದ ವಿಶ್ವ ಸಂಸ್ಕೃತಿ ಉತ್ಸವದಿಂದಾದ ಹಾನಿ ಕುರಿತ ವರದಿ ಬಗ್ಗೆ ಪ್ರಶ್ನಿಸಿದ್ದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೆಂಡಾಮಂಡಲವಾಗಿದೆ. ಇತ್ತೀಚೆಗೆ ನದಿ ದಂಡೆ ಮೇಲೆ ಆದ ಹಾನಿ ಕುರಿತಂತೆ 7 ಮಂದಿ ತಜ್ಞರ ಸಮಿತಿ ವರದಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ವರದಿ ಕುರಿತಂತೆ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ ಕೆಲವೊಂದು ಪ್ರಶ್ನೆಗಳನ್ನು ಕೇಳಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮಂಡಳಿ ‘ಇದು ಸರಿಯಲ್ಲ. ಪರಿಸರಕ್ಕಾಗಿ ಕೆಲಸ ಮಾಡಿದವರ ಬಗ್ಗೆ ನೀವು ಹೇಳಿಕೆಗಳನ್ನು ಕೊಡುವಂತಿಲ್ಲ. ನಾವು ಎಚ್ಚರಿಕೆ ನೀಡುತ್ತಿದ್ದೇವೆ. ನೀವು ನ್ಯಾಯಿಕ ಕಟ್ಟುಪಾಡುಗಳನ್ನು ಮೀರಿದ್ದೇ ಆದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ಹೇಸುವುದಿಲ್ಲ’ ಎಂದು ಖಡಕ್ ಆಗಿ ಹೇಳಿದೆ. ಈ ಪ್ರಾಧಿಕಾರದ ವಕೀಲರು, ತಜ್ಞರ ಸಮಿತಿ ನೀಡಿದ ವರದಿಯಲ್ಲಿ ಯಾವ ರೀತಿಯ ತಂತ್ರಜ್ಞಾನಗಳನ್ನು ಬಳಸಲಾಗಿದೆ ಮತ್ತು ಅದರಲ್ಲಿ ಹೇಳಿದ ಅಂಶಗಳ ಕುರಿತಷ್ಟೇ ಪ್ರಶ್ನಿದ್ದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.