ಆರ್ಥರ್ ಜೈಲಿನಲ್ಲಿ ಮಲ್ಯಗೆ ಆತಿಥ್ಯ !
Team Udayavani, Nov 27, 2017, 6:00 AM IST
ಹೊಸದಿಲ್ಲಿ: ಸುಮಾರು 9 ಸಾವಿರ ಕೋಟಿ ರೂ.ಗೂ ಅಧಿಕ ಸಾಲ ತೀರಿಸದೆ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಿದರೆ, ಮುಂಬಯಿಯ ಆರ್ಥರ್ ರಸ್ತೆಯ ಜೈಲಿನಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡುವುದಾಗಿ ಲಂಡನ್‌ನ ಕೋರ್ಟ್‌ಗೆ ಮುಂದಿನ ವಾರ ಭಾರತ ಸ್ಪಷ್ಟಪಡಿಸಲಿದೆ.
ಈ ವಿಷಯ ಕೋರ್ಟ್‌ಗೆ ಮನವರಿಕೆ ಮಾಡಿ ಕೊಡಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ಹೇಳಿವೆ. ಒಮ್ಮೆ ಅವರು ಭಾರತಕ್ಕೆ ಬಂದರೆ ಅವರ ಭದ್ರತೆ, ಸುರಕ್ಷತೆ ಎಲ್ಲವನ್ನೂ ಯಾವುದೇ ಲೋಪವಿಲ್ಲದಂತೆ ನೋಡಿಕೊಳ್ಳುತ್ತೇವೆ. ಇದರ ಬಗ್ಗೆ ಆತಂಕ ಬೇಡ ಎಂದು ಯುಕೆಯ ವೆಸ್ಟ್ ಮಿನ್‌ಸ್ಟರ್ ಕೋರ್ಟ್‌ಗೆ ಸರಕಾರ ಅರಿಕೆ ಮಾಡಲಿದೆ.
ಜಗತ್ತಿನ ಇತರ ದೇಶಗಳ ಜೈಲಿನಂತೆಯೇ ಭಾರತದ ಜೈಲುಗಳೂ ಇದ್ದು, ಕೈದಿಗಳಿಗೆ ಗರಿಷ್ಠ ಭದ್ರತೆ ನೀಡಲಾಗುತ್ತಿದೆ. ಅದರಲ್ಲೂ ಆರ್ಥರ್ ರಸ್ತೆಯಲ್ಲಿರುವ ಜೈಲು ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿದ್ದು, ಇಲ್ಲಿ ಮಲ್ಯ ಅವರ ಜೀವಕ್ಕೆ ಯಾವುದೇ ಅಪಾಯ ಆಗದು. ಭಾರತದ ಜೈಲಲ್ಲಿ ಭದ್ರತೆಯ ಕೊರತೆಯಿದೆ ಎಂಬ ಮಲ್ಯ ಪರ ವಕೀಲರ ವಾದವು ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಇಂಥ ಸುಳ್ಳು ಆರೋಪಗಳ ಮೂಲಕ ಗಡಿಪಾರಿನಿಂದ ತಪ್ಪಿಸಿಕೊಳ್ಳುವುದು ಮಲ್ಯ ಅವರ ಯೋಜನೆಯಾಗಿದೆ ಎಂದೂ ಭಾರತವು ಸ್ಪಷ್ಟಪಡಿಸಲಿದೆ. ಮಲ್ಯ ಗಡಿಪಾರು ಕುರಿತ ವಿಚಾರಣೆ ಡಿ. 4ರಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.