ಉಗ್ರವಾದಕ್ಕೆ 370ನೇ ವಿಧಿ ಕಾರಣ


Team Udayavani, Aug 6, 2019, 4:10 AM IST

ugravaditana

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 71 ವರ್ಷಗಳಿಂದ ಜಾರಿಯಲ್ಲಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸುವಂಥ ಐತಿಹಾಸಿಕ ನಿರ್ಧಾರವನ್ನು ಸೋಮವಾರ ಕೇಂದ್ರ ಸರ್ಕಾರ ಕೈಗೊಂಡಿದೆ. ಜತೆಗೆ ರಾಜ್ಯವನ್ನು 2 ಭಾಗವಾಗಿ ವಿಂಗಡಿಸುವ ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ ವಿಧೇಯಕ 2019ಕ್ಕೆ ರಾಜ್ಯಸಭೆ ಗುರುವಾರ ಅಂಗೀಕಾರ ನೀಡಿದೆ. ವಿಧೇಯಕದ ಪರವಾಗಿ 125, ವಿರುದ್ಧವಾಗಿ 61 ಮತಗಳು ಬಿದ್ದಿದ್ದು, ಒಬ್ಬ ಸದಸ್ಯ ಗೈರುಹಾಜರಾಗಿದ್ದರು. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರ ಮೀಸಲು (2ನೇ ತಿದ್ದುಪಡಿ ) ವಿಧೇಯಕಕ್ಕೂ ಅನುಮೋದನೆ ನೀಡಲಾಗಿದೆ. ಅದರ ಅನ್ವಯ ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲು ನೀಡಲು ಅನುಕೂಲವಾಗಲಿದೆ.

ಇನ್ನು ಮುಂದೆ ಕಣಿವೆ ರಾಜ್ಯದಲ್ಲಿ ಲಡಾಖ್‌ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಿ ಬದಲಾಗಲಿದೆ. ಲೋಕಸಭೆಯಲ್ಲಿ ಮಂಗಳವಾರ ವಿಧೇಯಕ ಮಂಡಿಸಲಾಗುತ್ತದೆ. ದೀರ್ಘ‌ ಕಾಲದಿಂದ ರಾಜಕೀಯವಾಗಿ ವಾದ ಪ್ರತಿವಾದಕ್ಕೆ ಕಾರಣವಾಗಿದ್ದ ಸಂವಿಧಾನದ 371ನೇ ವಿಧಿ ರದ್ದು ಮಾಡುವ ಬಗ್ಗೆ ಸೋಮವಾರ ನಡೆದಿದ್ದ ಕೇಂದ್ರ ಸಂಪುಟದ ವಿಶೇಷ ಸಭೆ ನಿರ್ಧರಿಸಿತ್ತು. ರಾಜ್ಯಸಭೆಯಲ್ಲಿಯೇ ಅದನ್ನು ಪ್ರಕಟಿಸುವ ಬಗ್ಗೆ ಸೂಚನೆ ಲಭಿಸಿತ್ತು.

ಉಗ್ರವಾದ ಹೆಚ್ಚಳಕ್ಕೆ ಕಾರಣ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯೇ ಕಾರಣ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಹೀಗಾಗಿಯೇ ಅಲ್ಲಿ ಬಡತನ ಮತ್ತು ಅಭಿವೃದ್ಧಿಯಾಗದೇ ಇರಲು ಕಾರಣ ಎಂದು ಪ್ರತಿಪಾದಿಸಿದ್ದಾರೆ. ಪ್ರತಿಪಕ್ಷಗಳು ಆರೋಪ ಮಾಡುವಂತೆ ಕಾಶ್ಮೀರ ಮತ್ತೂಂದು ಪ್ಯಾಲೆಸ್ತೀನ್‌ ಅಥವಾ ಯುದ್ಧಪೀಡಿತ ಕೊಸೊವೋ ಆಗಲು ಅವಕಾಶ ಕೊಡುವುದಿಲ್ಲ. ಮುಂದಿನ ಐದು ವರ್ಷಗಳಲ್ಲಿ ಕಣಿವೆ ರಾಜ್ಯವನ್ನು ಭೂಮಿಯ ಮೇಲಿನ ಸ್ವರ್ಗದಂತೆ ಮಾಡಿ, ಅದನ್ನು ಕಾಯ್ದುಕೊಂಡು ಬರುತ್ತೇವೆ ಎಂದರು.

ಮತ್ತೆ ಯಥಾ ಸ್ಥಿತಿ: ರಾಜ್ಯದಲ್ಲಿ ಉಗ್ರವಾದ ಕಡಿಮೆಯಾಗಿ ಸಾಮಾನ್ಯ ಸ್ಥಿತಿ ಮರಳಿದರೆ ಮತ್ತೆ ರಾಜ್ಯದ ಸ್ಥಾನಮಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ ಅಮಿತ್‌ ಶಾ. ಸಂವಿಧಾನದ 370, 35ಎ ವಿಧಿಗಳಿಂದಾಗಿ ರಾಜ್ಯದಲ್ಲಿ ರಿಯಲ್‌ ಎಸ್ಟೇಟ್‌ ವಹಿವಾಟು ದೇಶದ ಇತರ ಸ್ಥಳಗಳಿಗೆ ಹೋಲಿಕೆ ಮಾಡಿದರೆ ಅಭಿವೃದ್ಧಿಯಾಗಿಲ್ಲ. ಹೊರಗಿನವರಿಗೆ ಭೂಮಿ ಖರೀದಿ ನಿಷೇಧ ಹೇರಿದ್ದರಿಂದಲಾಗಿ ಪ್ರವಾಸೋದ್ಯಮವೂ ಸುಧಾರಣೆಯಾಗಿಲ್ಲ. ಭಯೋತ್ಪಾದನೆಯಿಂದಾಗಿ ಸುಮಾರು 41 ಸಾವಿರಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ ಎಂದರು.

ಬೆಳಗ್ಗೆ ಘೋಷಣೆ: ಸಂವಿಧಾನದ 370ನೇ ವಿಧಿ ರದ್ದು ಮಾಡುವ ಬಗ್ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ರ ಆದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ವಿಭಜನೆ ವಿಧೇಯಕ ಪ್ರಕಟವಾಗುತ್ತಿದ್ದಂತೆಯೇ ಕಾಂಗ್ರೆಸ್‌, ಟಿಎಂಸಿ, ಡಿಎಂಕೆ, ಎನ್‌ಸಿಪಿ ಎಡಪಕ್ಷಗಳ ಸಂಸದರು ಘೋಷಣೆ ಕೂಗತೊಡಗಿದರು. ಆದರೆ ಬಿಎಸ್‌ಪಿ, ಬಿಜೆಡಿ, ಟಿಆರ್‌ಎಸ್‌, ಎಐಎಡಿಎಂಕೆ ಸಂಸದರು ಸರ್ಕಾರದ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಐತಿಹಾಸಿಕ: ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಜತೆಗೆ ಸೇರಿಸಲು ಅವಕಾಶ ನೀಡದೇ ಇರುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸುವ ನಿರ್ಧಾರ ಪ್ರಕಟಿಸುವುದು ಐತಿಹಾಸಿಕ. ಅದು ಕಣಿವೆ ರಾಜ್ಯಕ್ಕೆ ಅನ್ವಯವಾಗುವುದಿಲ್ಲ ಎಂದು ಪ್ರತಿಪಕ್ಷಗಳ ಕೋಲಾಹಲದ ನಡುವೆ ಘೋಷಣೆ ಮಾಡಿದರು. ಈ ಬಗ್ಗೆ ರಾಷ್ಟ್ರಪತಿ ಆದೇಶಕ್ಕೆ ಸಹಿ ಮಾಡಿದ್ದಾರೆ ಎಂದರು. ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆ ರದ್ದಾಗಿರುವ ಹಿನ್ನೆಲೆಯಲ್ಲಿ ಮತ್ತು ವಿಧಾನಸಭೆ ಈಗಾಗಲೇ ವಿಸರ್ಜನೆಯಾಗಿ ರುವುದರಿಂದ ಅದರ ಸಂಪೂರ್ಣ ಅಧಿಕಾರ ಸಂಸತ್‌ನಲ್ಲಿಯೇ ಇದೆ ಎಂದರು.

ರಾಷ್ಟ್ರಪತಿಗೆ ಅಧಿಕಾರ ಇದೆ: ಸಂವಿಧಾನದ 370ನೇ ವಿಧಿಯ ನಿಯಮ 3ನ್ನು ಓದಿ ಹೇಳಿದ ಶಾ “ಸಂವಿಧಾನದ 370ನೇ ವಿಧಿ ರದ್ದಾಗಿದೆ ಅಥವಾ ಅದಕ್ಕೆ ತಿದ್ದುಪಡಿ ಮಾಡಲು ರಾಷ್ಟ್ರಪತಿಗೆ ಅಧಿಕಾರ ಇದೆ ಎಂದರು. ಸಂವಿಧಾನದ ಪ್ರಸ್ತಾಪಕ್ಕೆ ಕಾಂಗ್ರೆಸ್‌ 1952 ಮತ್ತು 1962ರಲ್ಲಿ ಕೈಗೆತ್ತಿಕೊಂಡಿದ್ದ ವಿಧಾನದಂತೆಯೇ ಅನುಸರಿಸುತ್ತಿದ್ದೇವೆ ಎಂದಿರುವ ಶಾ, ಪ್ರಕಟಣೆ ಹೊರಡಿಸಿದ್ದೇವೆ ಎಂದರು.

ಹಾಲಿ ಸ್ಥಿತಿ ಚರ್ಚೆಯಾಗಲಿ: ವಿಧೇಯಕ ರದ್ದು ಮಾಡುವ ಪ್ರಸ್ತಾಪ ಮಾಡುವ ಮುನ್ನ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್‌ ಅವರು ನಿಷೇಧಾಜ್ಞೆ ಜಾರಿಗೊಳಿಸಿದ್ದು ಮತ್ತು ಪ್ರಮುಖ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಿದ್ದರ ಬಗ್ಗೆ ಮೊದಲು ಚರ್ಚೆಯಾಗಬೇಕು ಎಂದು ಒತ್ತಾಯಿಸಿದರು.

ಲೋಕಸಭೆಯಲ್ಲಿ ಕೋಲಾಹಲ: ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಪುನರ್‌ ರಚಿಸುವ ವಿಧೇಯಕ ಮತ್ತು ಸಂವಿಧಾನದ 370ನೇ ವಿಧಿ ರದ್ದು ಮಾಡುವ ಪ್ರಸ್ತಾಪದ ವಿರುದ್ಧ ಕೋಲಾಹಲವೇ ಏರ್ಪಟ್ಟಿತು. ಕಾಂಗ್ರೆಸ್‌ ಸಂಸದರು “ಪ್ರಜಾಪ್ರಭುತ್ವಕ್ಕೆ ಅವಮಾನ’ “ನ್ಯಾಯ ಬೇಕು’ “ಪ್ರಧಾನಮಂತ್ರಿ ಸದನಕ್ಕೆ ಆಗಮಿಸಬೇಕು’ ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಪ್ರಸ್ತಾಪ: ರಾಜ್ಯಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನಾರಚನೆ ವಿಧೇಯಕ ಮಂಡಿಸಿ ಚರ್ಚೆ ಪ್ರಗತಿಯಲ್ಲಿರುವಂತೆಯೇ ಗೃಹ ಸಚಿವ ಅಮಿತ್‌ ಶಾ ಅದನ್ನು ಲೋಕಸಭೆಯಲ್ಲಿ ಮಂಡಿಸುವ ಬಗ್ಗೆ ಪ್ರಸ್ತಾಪ ಮಂಡಿಸಿದ್ದಾರೆ. ಜತೆಗೆ ಸಂವಿಧಾನದ 370ನೇ ವಿಧಿ ರದ್ದು ಮಾಡುವ ರಾಷ್ಟ್ರಪತಿಗಳ ಆದೇಶವನ್ನೂ ಸದನದಲ್ಲಿ ಪ್ರಸ್ತಾಪಿಸಿದರು. ಮಂಗಳವಾರ ವಿಧೇಯಕವನ್ನು ಸದಸ್ಯರ ಅನುಕೂಲಕ್ಕಾಗಿ ಮಂಡಿಸುವುದಾಗಿ ಶಾ ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವೂ ಭಾರತಕ್ಕೆ ಸೇರಲಿ: ರಾಜ್ಯಸಭೆಯಲ್ಲಿ ವಿಧೇಯಕದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಬಿಜೆಪಿಯ ರಾಜ್ಯಸಭೆ ಸದಸ್ಯ ಡಾ.ಸುಬ್ರಹ್ಮಣ್ಯನ್‌ ಸ್ವಾಮಿ ಕೇಂದ್ರದ ನಿರ್ಧಾರ ಸ್ವಾಗತಾರ್ಹ. ಇದೀಗ ಕಣಿವೆ ರಾಜ್ಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆ ವಹಿಸುವ ವಿಚಾರ ಪ್ರಸ್ತಾಪಿಸಲು ಸಾಧ್ಯವೇ ಇಲ್ಲ ಎಂದರು. ಮುಂದಿನ ಹಂತದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವೂ ಭಾರತಕ್ಕೆ ಸೇರುವಂತಾಗಬೇಕು. ಆ ಬಗ್ಗೆಯೂ ಪ್ರಯತ್ನಗಳು ನಡೆಯಬೇಕು. ಈ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. 370ನೇ ವಿಧಿ ರದ್ದು ಮಾಡಲು ಸಂವಿಧಾನದ ತಿದ್ದುಪಡಿ ಅಗತ್ಯವಿಲ್ಲ. ಒಂದು ಆದೇಶದ ಮೂಲಕ ಅದನ್ನು ರದ್ದು ಮಾಡಲು ಸಾಧ್ಯವಾಗುತ್ತದೆ. ಆದರೆ ಕಾಂಗ್ರೆಸ್‌ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು ಎಂದು ದೂರಿದ್ದಾರೆ.

ಸಂವಿಧಾನದ ಪ್ರತಿ, ಅಂಗಿ ಹರಿದುಕೊಂಡರು: ಕರ್ನಾಟಕದ ವಿಧಾನಸಭೆಯಲ್ಲಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅಂಗಿ ಹರಿದುಕೊಂಡು ಸುದ್ದಿಯಾಗಿದ್ದರು. ಇದೀಗ ಪಿಡಿಪಿಯ ಇಬ್ಬರು ರಾಜ್ಯಸಭೆ ಸದಸ್ಯರಾಗಿರುವ ಮಿರ್‌ ಫ‌ಯಾಜ್‌ ಮತ್ತು ನಝೀರ್‌ ಅಹ್ಮದ್‌ ಲವೇ ಕೇಂದ್ರ ನಿರ್ಧಾರ ಖಂಡಿಸಿ ಸದನದ ಬಾವಿಗೆ ನುಗ್ಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜತೆಗೆ ಸಂವಿಧಾನದ ಪ್ರತಿ ಹರಿದರು. ಜತೆಗೆ ಅವರು ಧರಿಸಿದ್ದ ಕುರ್ತಾವನ್ನು ಹರಿದುಕೊಂಡರು. ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಭಾಪತಿ ಎಂ.ವೆಂಕಯ್ಯ ನಾಯ್ಡು ಮಾರ್ಶಲ್‌ಗ‌ಳ ಮೂಲಕ ಅವರನ್ನು ಹೊರಹಾಕಿಸಿದರು. ಜತೆಗೆ ಸಂವಿಧಾನದ ಪ್ರತಿ ಹರಿದ ಕಾರಣ ಸಂಸದರಿಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.

ಪೇಪರ್‌ ಮತದಾನ: ತಾಂತ್ರಿಕ ಕಾರಣಗಳಿಂದ ಬಟನ್‌ ಒತ್ತಿ ಮತ ಹಾಕುವ ವ್ಯವಸ್ಥೆ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ ಎಲ್ಲರೂ ಪೇಪರ್‌ ಮೂಲಕ ವಿಧೇಯಕದ ಪರ-ವಿರೋಧ ಮತ ಚಲಾಯಿಸಲು ಸಭಾಪತಿ ಅವಕಾಶ ಮಾಡಿಕೊಟ್ಟರು.

ಟಾಪ್ ನ್ಯೂಸ್

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.