Delhi ಸರ್ಕಾರ ಉರುಳಿಸಲು 7 ಆಪ್ ಶಾಸಕರಿಗೆ ಬಿಜೆಪಿ ಗಾಳ.. 25 ಕೋಟಿ ಆಮಿಷ: ಕೇಜ್ರಿವಾಲ್ ಆರೋಪ
Team Udayavani, Jan 27, 2024, 12:08 PM IST
ನವದೆಹಲಿ: ತಮ್ಮ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ದೆಹಲಿ ಸರ್ಕಾರವನ್ನು ಕೆಡವಲು ದೊಡ್ಡ ಮಟ್ಟದ ಪಿತೂರಿ ನಡೆಸಲಾಗುತ್ತಿದೆ ಜೊತೆಗೆ ನಮ್ಮ ಪಕ್ಷದ ಏಳು ಶಾಸಕರಿಗೆ ಭಾರತೀಯ ಜನತಾ ಪಕ್ಷಕ್ಕೆ ಸೇರಲು 25 ಕೋಟಿ ರೂಗಳ ಆಮಿಷ ಒಡ್ಡಲಾಗಿದೆ ಎಂದು ಶನಿವಾರ ಹೇಳಿದ್ದಾರೆ.
ಅಲ್ಲದೆ ಸಾಮಾಜಿಕ ಜಾಲತಾಣ ಟ್ವಿಟರ್ X ನಲ್ಲಿ ಬರೆದಿರುವಂತೆ ಈಗಾಗಲೇ ನಾನು ನನ್ನ ಪಕ್ಷದ ಏಳು ಮಂದಿ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಈ ವೇಳೆ ತಿಳಿದ ವಿಚಾರವೇನೆಂದರೆ ಮುಂದಿನ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಇದಾದ ಬಳಿಕ ಶಾಶಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯವನ್ನು ನಾವು ನಡೆಸುವುದಾಗಿ ಬಿಜೆಪಿ ತಯಾರಿ ನಡೆಸಿದೆ ಎಂದು ಬರೆದುಕೊಂಡಿದ್ದಾರೆ.
ಇದರ ಮುಂದುವರೆದ ಭಾಗವಾಗಿ ಆಪ್ ನ ಇಪ್ಪತ್ತೊಂದು ಶಾಸಕರನ್ನು ಬಿಜೆಪಿ ಸಂಪರ್ಕ ಮಾಡಿದ್ದು ಅವರಿಗೆ ೨೫ ಕೋಟಿ ಆಮಿಷ ನೀಡಲಾಗಿದೆ. ಬಿಜೆಪಿಗೆ ಸೇರಿದ ಶಾಸಕರಿಗೆ ಪಕ್ಷದಿಂದ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಹೇಳಿಕೊಂಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಬಿಜೆಪಿ ಸಂಪರ್ಕಿಸಿದ ಏಳು ಶಾಸಕರು ಬಿಜೆಪಿ ಸೇರಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ. ಇದರಿಂದಲೇ ಅರ್ಥವಾಗುತ್ತೆ ಇಡಿ ಅಧಿಕಾರಿಗಳು ನನಗೆ ನೀಡಿದ ಸಮನ್ಸ್ ಹಿಂದೆ ಯಾರ ಕೈವಾಡ ಇದೆ ಎಂಬುದು ಇದು ಕೇವಲ ನನ್ನ ವಿಚರೆಣೆಗೆ ಅಲ್ಲ ಬದಲಾಗಿ ನನ್ನನ್ನು ಚುನಾವಣೆಯಿಂದ ದೂರ ಉಳಿಯುವಂತೆ ಮಾಡಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.
पिछले दिनों इन्होंने हमारे दिल्ली के 7 MLAs को संपर्क कर कहा है – “कुछ दिन बाद केजरीवाल को गिरफ़्तार कर लेंगे। उसके बाद MLAs को तोड़ेंगे। 21 MLAs से बात हो गयी है। औरों से भी बात कर रहे हैं। उसके बाद दिल्ली में आम आदमी पार्टी की सरकार गिरा देंगे। आप भी आ जाओ। 25 करोड़ रुपये देंगे…
— Arvind Kejriwal (@ArvindKejriwal) January 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.