I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
ಸರ್ವಾಧಿಕಾರದಿಂದ ದೇಶವನ್ನು ಉಳಿಸಬೇಕಾಗಿದೆ...
Team Udayavani, May 10, 2024, 9:29 PM IST
ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡು ಲೋಕಸಭೆ ಚುನಾವಣ ಪ್ರಚಾರಕ್ಕೆ ಧುಮುಕಿದ್ದಾರೆ.
ತಮ್ಮ ಅಧಿಕೃತ ನಿವಾಸವನ್ನು ತಲುಪಿದ ಕೂಡಲೇ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ಬೆಂಬಲಿಗರ ದೊಡ್ಡ ಸಭೆಯನ್ನುದ್ದೇಶಿಸಿ “ನಾನು ಹಿಂತಿರುಗಿದ್ದೇನೆ. ನಿಮ್ಮೆಲ್ಲರ ಮುಂದೆ ಇರಲು ಸಂತೋಷವಾಗಿದೆ. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ನಾನು ನಿಮಗೆ ಹೇಳಿದ್ದೆ ಅದೇ ರೀತಿ ನಾನು ಹಿಂತಿರುಗಿದ್ದೇನೆ” ಎಂದರು.
ಟೀ ಶರ್ಟ್‌ನಲ್ಲಿದ್ದ ಕೇಜ್ರಿವಾಲ್ ಅವರು ನಗು ನಗುತ್ತಾ ಮನೆ ಪ್ರವೇಶಿಸಿ ತಂದೆ ತಾಯಿಯ ಆಶೀರ್ವಾದ ಪಡೆದರು. ತಮ್ಮ ಪಕ್ಷದ ಕಾರ್ಯಕರ್ತರ ಹರ್ಷೋದ್ಗಾರವನ್ನು ಸ್ವೀಕರಿಸಿ ಸಂಭ್ರಮಿಸಿ ನಗು ನಗುತ್ತಾ ಮನೆ ಪ್ರವೇಶಿಸಿದರು. ಆರತಿ ಬೆಳಗಿ ಅವರನ್ನು ನಿವಾಸಕ್ಕೆ ಸ್ವಾಗತಿಸಲಾಯಿತು.
‘ನಾನು ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ಮಾಡಿದ್ದೀರಿ. ನಾನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ಸರ್ವಾಧಿಕಾರದಿಂದ ದೇಶವನ್ನು ಉಳಿಸಬೇಕಾಗಿದೆ, ”ಎಂದರು.
ನಾಳೆ (ಶನಿವಾರ) ದೆಹಲಿಯ ಕನ್ನಾಟ್ ನಲ್ಲಿರುವ ಹನುಮಾನ್ ಮಂದಿರದಲ್ಲಿ ಜಮಾಯಿಸುವಂತೆ ಬೆಂಬಲಿಗರನ್ನು ಕೇಳಿಕೊಂಡಿದ್ದಾರೆ.ಅಲ್ಲಿ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
जिसके साथ माता-पिता का आशीर्वाद हो,
उसका कोई तानाशाह कुछ नहीं बिगाड़ सकता 🙏#ModiCantStopKejriwal #SatyamevJayte pic.twitter.com/ez6LZBp31B— AAP (@AamAadmiParty) May 10, 2024
50 ದಿನಗಳ ಬಂಧನದ ನಂತರ ಲೋಕಸಭೆ ಚುನಾವಣ ಪ್ರಚಾರಕ್ಕಾಗಿ 21 ದಿನಗಳ ಬಿಡುಗಡೆಯನ್ನು ನೀಡಿದ ಸುಪ್ರೀಂ ಕೋರ್ಟ್, ಏಳು ಹಂತದ ಚುನಾವಣೆಯ ಕೊನೆಯ ಹಂತದ ಮತದಾನ ಮುಗಿದ ಒಂದು ದಿನದ ನಂತರ ಜೂನ್ 2 ರಂದು ಸ್ವತಃ ಶರಣಾಗುವಂತೆ ಕೇಜ್ರಿವಾಲ್ ಅವರನ್ನು ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.