Delhi Liquor Scam: ಕೇಜ್ರಿವಾಲ್ಗೆ 15ದಿನ ನ್ಯಾಯಾಂಗ ಬಂಧನ,ತಿಹಾರ್ ಜೈಲಿಗೆ ಶಿಫ್ಟ್
Team Udayavani, Apr 1, 2024, 12:24 PM IST
ನವದೆಹಲಿ: ದೆಹಲಿ (Delhi) ಮದ್ಯ ಹಗರಣ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮತ್ತೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರೊಂದಿಗೆ ಕೇಜ್ರಿವಾಲ್ ಏಪ್ರಿಲ್ 15 ರವರೆಗೆ ಜೈಲಿನಲ್ಲಿರಬೇಕಾಗಿದೆ.
ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶಿಸಿದ್ದು ಇದರಂತೆ ಸಿಎಂ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪದ ಮೇಲೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ (ED) ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿದೆ. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹೆಚ್ಚಿನ ವಿಚಾರಣೆ ಅಗತ್ಯ ಇರುವ ನಿಟ್ಟಿನಲ್ಲಿ ಇಡಿ ಪರ ವಕೀಲರು ವಾದ ಮಾಡಿಸಿದ ನಿಟ್ಟಿನಲ್ಲಿ ಆದೇಶ ಹೊರಡಿಸಿದ ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಏಪ್ರಿಲ್ ೧೫ ರವರೆಗೆ ನ್ಯಾಯಾಂಗ ಬಂಧನವನ್ನು ಮುಂದುವರೆಸುವಂತೆ ಆದೇಶಿಸಿದೆ. ಮತ್ತೊಂದೆಡೆ, ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಏಪ್ರಿಲ್ 3 ರಂದು ದೆಹಲಿ ಹೈಕೋರ್ಟ್‌ನಲ್ಲಿ (Delhi High court) ನಡೆಯಲಿದೆ.
Excise policy case | Delhi’s Rouse Avenue court sends Delhi CM Arvind Kejriwal to judicial custody till April 15 pic.twitter.com/EQhviDECmF
— ANI (@ANI) April 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.