ಕರೆನ್ಸಿ ನೋಟಿನಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರ: ಪ್ರಧಾನಿ ಮೋದಿಗೆ ಪತ್ರಬರೆದ ಕೇಜ್ರಿವಾಲ್
Team Udayavani, Oct 28, 2022, 11:18 AM IST
ಹೊಸದಿಲ್ಲಿ: ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳಿರಬೇಕು ಎಂಬ ತಮ್ಮ ಬೇಡಿಕೆಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪುರುಚ್ಚರಿಸಿದ್ದಾರೆ. ಹೊಸ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವಂತೆ ಅವರು ನಿನ್ನೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದ ಕೇಜ್ರಿವಾಲ್, ಇದು ದೇಶದ ಆರ್ಥಿಕ ಸಂಕಷ್ಟಗಳಿಂದ ಸಹಾಯ ಮಾಡುತ್ತದೆ ಎಂದು ಸಲಹೆ ನೀಡಿದ್ದರು.
“ಮಹಾತ್ಮಾ ಗಾಂಧಿಯವರೊಂದಿಗೆ ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಹಾಕಬೇಕು ಎಂದು 130 ಕೋಟಿ ಭಾರತೀಯರ ಪರವಾಗಿ ವಿನಂತಿಸುತ್ತಿದ್ದೇನೆ” ಎಂದು ಪ್ರಧಾನಿಯವರಿಗೆ ಬರೆದ ಪತ್ರದಲ್ಲಿ ಕೇಜ್ರಿವಾಲ್ ಹೇಳಿದ್ದಾರೆ.
“ದೇಶದ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತದ ಮೂಲಕ ಸಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತವು ಅಭಿವೃದ್ಧಿಶೀಲ ಮತ್ತು ಬಡ ದೇಶ ಎಂದೇ ಗುರುತಿಸಲ್ಪಡುತ್ತಿದೆ. ಒಂದು ಕಡೆ ನಾಗರಿಕರು ಕಷ್ಟಪಟ್ಟು ಕೆಲಸ ಮಾಡಬೇಕಾಗಿದೆ, ಆದರೆ ನಮ್ಮ ಪ್ರಯತ್ನಗಳಿಗೆ ದೇವರ ಆಶೀರ್ವಾದವೂ ಬೇಕು” ಎಂದು ಅವರು ಹಿಂದಿಯಲ್ಲಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿಯನ್ನು ‘ದೇಶಭಕ್ತ’ ಎಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ನಿನ್ನೆಯ ಪತ್ರಿಕಾಗೋಷ್ಠಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಾರ್ವಜನಿಕ ಬೇಡಿಕೆಗೆ ಜನರ ಅಪಾರ ಬೆಂಬಲವಿದೆ ಎಂದು ಹೇಳಿದ್ದರು. “ಜನರು ಇದರ ಬಗ್ಗೆ ತುಂಬಾ ಉತ್ಸುಕರಾಗಿದ್ದಾರೆ, ಪ್ರತಿಯೊಬ್ಬರೂ ಇದನ್ನು ಶೀಘ್ರವಾಗಿ ಜಾರಿಗೆ ತರಬೇಕೆಂದು ಬಯಸುತ್ತಾರೆ” ಎಂದು ಅವರು ಹೇಳಿದರು.
“ಎಲ್ಲಾ ನೋಟುಗಳನ್ನು ಬದಲಿಸಿ ಎಂದು ನಾನು ಹೇಳುತ್ತಿಲ್ಲ. ಆದರೆ ಪ್ರತಿ ತಿಂಗಳು ಬಿಡುಗಡೆಯಾಗುವ ಎಲ್ಲಾ ಹೊಸ ನೋಟುಗಳು ಅವುಗಳ ಚಿತ್ರಗಳನ್ನು ಹೊಂದಿರಬೇಕು.” ಎಂದು ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.