Trust Vote: ಇಂದು ಸಿಎಂ ಕೇಜ್ರಿವಾಲ್ ಗೆ ದೆಹಲಿ ಅಸೆಂಬ್ಲಿಯಲ್ಲಿ ವಿಶ್ವಾಸ ಮತ ಪರೀಕ್ಷೆ
Team Udayavani, Feb 17, 2024, 9:21 AM IST
ನವದೆಹಲಿ: ಒಂದೆಡೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚಿನ ಬೆಳವಣಿಗೆಗಳು ನಡೆಯುತ್ತಿವೆ, ಇದರ ಜೊತೆಗೆ ದೆಹಲಿಯ ಆಪ್ ಪಕ್ಷದ ನಾಯಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂಬ ಆರೋಪದ ನಡುವೆ ಇಂದು ವಿಶ್ವಾಸ ನಿರ್ಣಯ ಮಂಡಿಸಲು ಸಿಎಂ ಕೇಜ್ರಿವಾಲ್ ಮುಂದಾಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಮಂಡಿಸಿದರು, ಸದನವು ಮಂತ್ರಿ ಮಂಡಲದಲ್ಲಿ ವಿಶ್ವಾಸ ಹೊಂದಿದೆ ಎಂಬುದನ್ನು ಜನರಿಗೆ ತೋರಿಸಬೇಕಾಗಿದೆ ಎಂದು ಹೇಳಿದೆ ಇದರ ಮುಂದಿನ ಭಾಗವಾಗಿ ಇಂದು ವಿಶ್ವಾಸ ನಿರ್ಣಯ ಮಂಡಿಸಲು ಸಿಎಂ ಸಜ್ಜಾಗಿದ್ದಾರೆ.
ಆಪ್ ಶಾಸಕರನ್ನು ಖರೀದಿಸಲು ಮತ್ತು ಸರ್ಕಾರವನ್ನು ಉರುಳಿಸಲು ಬಿಜೆಪಿ ಪಕ್ಷ ಪ್ರಯತ್ನಿಸಿದೆ ಎಂದು ಸಿಎಂ ಆರೋಪಿಸಿದ ಬೆನ್ನಲ್ಲೇ ಈ ನಿರ್ಣಯ ಮಂಡಿಸಲಾಗಿದೆ. ನಮ್ಮ ಪಕ್ಷದ ನಾಯಕರು ಹಾಗೂ ಶಾಸಕರು ಆಪ್ ಬಿಟ್ಟು ಬೇರೆ ಬೇರೆ ಪಕ್ಷಗಳಿಗೆ ಸೇರುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದು ಇದೆಲ್ಲಾ ಶುದ್ದ ಸುಳ್ಳು ನಮ್ಮ ಪಕ್ಷದಲ್ಲಿ ಸಂಖ್ಯಾ ಬಲ ಕಡಿಮೆ ಆಗಿಲ್ಲ ಎಂಬುದನ್ನು ನಾವು ತೋರಿಸಿ ಕೊಡುವ ನಿಟ್ಟಿನಲ್ಲಿ ಇಂದು ವಿಶ್ವಾಸ ನಿರ್ಣಯವನ್ನು ಮಂಡಿಸುತ್ತೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇಷ್ಟು ಮಾತ್ರವಲ್ಲದೆ ಕೇಂದ್ರ ತನಿಖಾ ಸಂಸ್ಥೆಯಿಂದ ನೀಡುತ್ತಿರುವ ಸಮನ್ಸ್ ವಿಚಾರವಾಗಿಯೂ ಇಂದಿನ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದುವರೆಗೆ ಕೇಂದ್ರ ತನಿಖಾ ಸಂಸ್ಥೆಯಿಂದ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿ ಒಟ್ಟು ಆರು ಸಮನ್ಸ್ ಗಳನ್ನು ನೀಡಲಾಗಿದೆ ಆದರೆ ಅದೆಲ್ಲವನ್ನು ಕೇಜ್ರಿವಾಲ್ ತಿರಸ್ಕರಿಸಿದ್ದಾರೆ ಅಲ್ಲದೆ ನಮ್ಮ ಪಕ್ಷವನ್ನು ಬಲಹೀನ ಗೊಳಿಸುವ ತಂತ್ರ ಇದು ಹಾಗಾಗಿ ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಪಕ್ಷ ಹೇಳಿದೆ.
ಇದನ್ನೂ ಓದಿ: Panchkula Home: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ… ತಾಯಿಯಿಂದ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.