Liquor Policy Case: ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆಪ್ಟೆಂಬರ್ 25 ರವರೆಗೆ ವಿಸ್ತರಣೆ
Team Udayavani, Sep 11, 2024, 3:34 PM IST
ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ.
ರೂಸ್ ಅವೆನ್ಯೂ ನ್ಯಾಯಾಲಯ ನೀಡಿದ ಸಮನ್ಸ್‌ಗೆ ಹಾಜರಾಗಿದ್ದರು. ಸಿಎಂ ಕೇಜ್ರಿವಾಲ್ ಮತ್ತು ಇತರ ಬಂಧಿತ ಆರೋಪಿಗಳ ವಿಚಾರಣೆಯನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಈ ವೇಳೆ ವಿನೋದ್ ಚೌಹಾಣ್ ಭೌತಿಕವಾಗಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸೆಪ್ಟೆಂಬರ್ 5 ರಂದು, ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭುಯಾನ್ ಅವರ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಕೇಜ್ರಿವಾಲ್ ಅವರನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿನಿಧಿಸುತ್ತಿದ್ದಾರೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪಿತೂರಿಯ ಮೂಲಕ ಅಕ್ರಮ ಹಣದಿಂದ ಆಮ್ ಆದ್ಮಿ ಪಕ್ಷ (ಎಎಪಿ) ಲಾಭ ಪಡೆದಿದೆ ಎಂದು ಸಿಬಿಐ ಆರೋಪಿಸಿದೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ಉಸ್ತುವಾರಿಯೂ ಆಗಿರುವ ಕೇಜ್ರಿವಾಲ್ ಮೊದಲಿನಿಂದಲೂ ನೀತಿ ನಿರೂಪಣೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಹೇಳಿಕೊಂಡಿದೆ.
ಅಬಕಾರಿ ನೀತಿಯನ್ನು ಖಾಸಗೀಕರಣಗೊಳಿಸಲು ಕೇಜ್ರಿವಾಲ್ ಪೂರ್ವ ಯೋಜಿತ ಯೋಜನೆಯನ್ನು ಹೊಂದಿದ್ದರು ಮತ್ತು ಮಾರ್ಚ್ 2021 ರಲ್ಲಿ ಆಮ್ ಆದ್ಮಿ ಪಕ್ಷಕ್ಕೆ ವಿತ್ತೀಯ ಬೆಂಬಲವನ್ನು ಕೋರಿದ್ದಾರೆ ಎಂದು ಸಿಬಿಐ ತನ್ನ ಪೂರಕ ಚಾರ್ಜ್ ಶೀಟ್‌ನಲ್ಲಿ ಆರೋಪಿಸಿದೆ.
ಇದನ್ನೂ ಓದಿ: Davenagere: ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುವೆ: ಶಾಮನೂರು ಶಿವಶಂಕರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.