ಕೇರಳ ಜಡಿಮಳೆ: ಮತ್ತೆ 12 ಜೀವ ಬಲಿ, ಮೃತರ ಸಂಖ್ಯೆ 79ಕ್ಕೆ ಏರಿಕೆ
Team Udayavani, Aug 16, 2018, 11:37 AM IST
ತಿರುವನಂತಪುರ: ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ, ಭೂ ಕುಸಿತ, ಪ್ರವಾಹಕ್ಕೆ ಮತ್ತೆ 12 ಜೀವ ಬಲಿಯಾಗಿರುವುದಾಗಿ ಇಂದು ಗುರುವಾರದ ವರದಿ ತಿಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಮಳೆ, ಭೂಕುಸಿತ, ಪ್ರವಾಹ, ನೆರೆ ಮುಂತಾಗಿ ಸಂಭವಿಸಿರುವ ದುರಂತಗಳಿಗೆ ಬಲಿಯಾದವರ ಸಂಖ್ಯೆ 79ಕ್ಕೇರಿದೆ.
ಕಳೆದ ಆಗಸ್ಟ್ 8ರಿಂದ ರಾಜ್ಯದಲ್ಲಿ ಆರಂಭಗೊಂಡಿದ್ದ ಜಡಿ ಮಳೆ ಇನ್ನೂ ಮುಂದುವರಿದಿದ್ದು ಈ ಶನಿವಾರದ ತನಕವೂ ಈ ಸ್ಥಿತಿ ಹೀಗೆಯೇ ಉಳಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ, ಪರಿಹಾರ ಒದಗಿಸುವಿಕೆಯನ್ನು ಚುರುಕುಗೊಳಿಸುವಂತೆ ರಕ್ಷಣಾ ಸಚಿವಾಲಯಕ್ಕೆ ಸೂಚಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಗುರುವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನೂ ಫೋನಿನಲ್ಲಿ ಮಾತನಾಡಿಸಿ ರಾಜ್ಯದಲ್ಲಿ ತಾಜಾ ಸ್ಥಿತಿಗತಿಯನ್ನು ವಿಚಾರಿಸಿದ್ದಾರೆ.
“ನಾವಿಂದು ಕೇರಳದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದೇವೆ; ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ರಕ್ಷಣಾ ಸಚಿವಾಲಯವನ್ನು ಕೇಳಿಕೊಂಡಿದ್ದೇನೆ. ಕೇರಳ ಜನರ ಸುರಕ್ಷೆಗಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ನಿರಂತರ ಜಡಿ ಮಳೆ, ಪ್ರವಾಹ, ಭೂಕುಸಿತದಿಂದ ತತ್ತರಿಸುತ್ತಿರುವ ಕೇರಳದ ಎಲ್ಲ 14 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಪರಿಸ್ಥಿತಿ ಗಂಭೀರವಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.