ಮಲ್ಯ ವಿರುದ್ಧ ಜಾಹೀರಾತು?
Team Udayavani, Nov 9, 2017, 6:05 AM IST
ಹೊಸದಿಲ್ಲಿ: “ಸರಕಾರಿ ಬ್ಯಾಂಕ್ಗಳಿಗೆ ವಂಚನೆ ಮಾಡಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ವಿಜಯ ಮಲ್ಯ ಕುರಿತು ಮಾಹಿತಿ ಕೊಡಿ’. ಹೀಗೆಂದು ದೇಶದ ಪತ್ರಿಕೆಗಳಲ್ಲಿ ಶೀಘ್ರವೇ ಜಾಹೀರಾತು ಬಂದರೂ ಅಚ್ಚರಿ ಇಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ)ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಅದಕ್ಕೆ ಪೂರಕವಾಗಿ ನವದಿಲ್ಲಿಯ ಕೋಟೋìಂದು ಉದ್ಯಮಿ ಮಲ್ಯರನ್ನು ಘೋಷಿತ ಅಪರಾಧಿ (ಪ್ರೊಕ್ಲೈಮ್ಡ್ ಒಫೆಂಡರ್) ಎಂದು ಘೋಷಿಸಲು ನಿರ್ಧರಿಸಿದೆ. ಜತೆಗೆ ಡಿ.18ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಮಲ್ಯಗೆ ಆದೇಶ ನೀಡಿದೆ. ಇದು ಕೊನೆಯ ಅವಕಾಶ ಎಂದೂ ಕೋರ್ಟ್ ನೆನಪು ಮಾಡಿಕೊಟ್ಟಿದೆ.
ಹೊಸದಿಲ್ಲಿಯ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೀಪಕ್ ಶೆರ್ಹಾವತ್ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ)ಕ್ಕೆ ಸೂಚನೆ ನೀಡಿ, ಮಲ್ಯರನ್ನು ಘೋಷಿತ ಅಪರಾಧಿ ಎಂದು ಪ್ರಕಟಿಸಲು ಮತ್ತು ಮುಂದಿನ ಪ್ರಕ್ರಿಯೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಮಲ್ಯ ವಿರುದ್ಧ ಜಾರಿ ಮಾಡಲಾಗಿರುವ ಜಾಮೀನು ರಹಿತ ವಾರಂಟ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವ ಹಿನ್ನೆಲೆಯಲ್ಲಿ ಕೋರ್ಟ್ ಈ ಕ್ರಮ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.