ಯೋಗಿ ಆದಿತ್ಯನಾಥ್ ಹೈಕೋರ್ಟ್ ಜಡ್ಜ್ ರೀತಿ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ
Team Udayavani, Jun 13, 2022, 8:25 AM IST
ಕಚ್: ಪ್ರಯಾಗ್ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾನುವಾರ ವಾಗ್ದಾಳಿ ನಡೆಸಿದ್ದು, ‘ಯೋಗಿ ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಂತೆ ವರ್ತಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
“ಯುಪಿ ಮುಖ್ಯಮಂತ್ರಿ ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸುತ್ತಾರೆ ಮತ್ತು ಅವರ ಮನೆಗಳನ್ನು ಕೆಡವುತ್ತಾರೆಯೇ?” ಎಂದು ಗುಜರಾತ್ ನ ಕಚ್ನಲ್ಲಿ ರಾಲಿಯಲ್ಲಿ ಓವೈಸಿ ಕೇಳಿದರು.
ಪ್ರಯಾಗ್ ರಾಜ್ ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ನ ಮನೆಯನ್ನು ಪ್ರಯಾಗ್ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು : ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ !
ಆರೋಪಿ ಜಾವೇದ್ ಮೊಹಮ್ಮದ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆ. ಫಾತಿಮಾ ಕಳೆದ ವರ್ಷ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು. ಪ್ರಯಾಗ್ ರಾಜ್ ಹಿಂಸಾಚಾರದಲ್ಲಿ ಆಕೆಯ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧ್ವಂಸಕ್ಕೂ ಮುನ್ನ ಭಾನುವಾರ ಬೆಳಗ್ಗೆ ಅವರ ಮನೆಯಲ್ಲಿ ಶೋಧ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.