ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗುತ್ತಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ
Team Udayavani, Aug 4, 2022, 2:25 PM IST
ಗುವಾಹಟಿ : ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ತೀವ್ರ ಕಳವಳ ವ್ಯಕ್ತ ಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ತಿಂಗಳಲ್ಲಿ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಅನ್ಸಾರುಲ್ ಇಸ್ಲಾಂನೊಂದಿಗೆ ಸಂಪರ್ಕ ಹೊಂದಿರುವ ಐದು ಪ್ರಕರಣಗಳೊಂದಿಗೆ ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗಿರುವುದು ಕಂಡು ಬಂದಿದೆ. ಅನ್ಸಾರುಲ್ ಇಸ್ಲಾಂಗೆ ಸೇರಿದ ಆರು ಬಾಂಗ್ಲಾದೇಶಿ ಉಗ್ರರು ಯುವಕರಿಗೆ ಉಗ್ರ ತರಬೇತಿ ನೀಡಲು ಅಸ್ಸಾಂಗೆ ಪ್ರವೇಶಿಸಿದ್ದಾರೆ ಮತ್ತು ಈ ವರ್ಷ ಮಾರ್ಚ್‌ನಲ್ಲಿ ಬಾರ್ಪೇಟಾದಲ್ಲಿ ಓರ್ವನನ್ನು ಮಾತ್ರ ಬಂಧಿಸಲಾಗಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ನಿಗೂಢ ಸ್ಥಳಗಳಲ್ಲಿ ಹಲವು ಜಿಹಾದಿ ತರಬೇತಿ ಶಿಬಿರಗಳನ್ನು ಬಾಂಗ್ಲಾ ಮೂಲದ ಉಗ್ರರು ನಡೆಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯದ ಹೊರಗಿನ ಇಮಾಮ್‌ಗಳಿಂದ ಖಾಸಗಿ ಮದರಸಾಗಳಲ್ಲಿ ತರಬೇತಿ ನೀಡುತ್ತಿರುವುದು ಆತಂಕಕಾರಿಯಾಗಿದೆ.ಈ ಜಿಹಾದಿ ಚಟುವಟಿಕೆಯು ಭಯೋತ್ಪಾದಕ ಅಥವಾ ಬಂಡಾಯ ಚಟುವಟಿಕೆಗಳಿಗಿಂತ ಬಹಳ ಭಿನ್ನವಾಗಿದೆ. ಹಲವಾರು ವರ್ಷಗಳಿಂದ ಇಸ್ಲಾಮಿಕ್ ಮೂಲಭೂತವಾದವನ್ನು ಉತ್ತೇಜಿಸುವಲ್ಲಿ ಸಕ್ರಿಯವಾಗಿದೆ ಮತ್ತು ಅಂತಿಮವಾಗಿ ವಿಧ್ವಂಸಕ ಚಟುವಟಿಕೆಗಳತ್ತ ತಿರುಗುತ್ತದೆ” ಎಂದು ಸಿಎಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.