200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ
ಪ್ರವಾಹಕ್ಕೆ 3 ಮಂದಿ ಬಲಿ
Team Udayavani, May 16, 2022, 7:38 PM IST
ನವದೆಹಲಿ: ಧಾರಾಕಾರ ಮಳೆ, ಪ್ರವಾಹ, ಭೂಕುಸಿತ, ಭೂಕಂಪ.ನಿರಂತರ ಪ್ರಾಕೃತಿಕ ವಿಕೋಪದಿಂದ ಅಸ್ಸಾಂ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಈಶಾನ್ಯ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಇದರ ನಡುವೆಯೇ 12 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿದ್ದು, ಮಗು ಸೇರಿದಂತೆ 3 ಮಂದಿ ಮೃತಪಟ್ಟಿದ್ದಾರೆ. ಶನಿವಾರವಷ್ಟೇ ಪ್ರವಾಹಕ್ಕೆ 3 ಮಂದಿ ಬಲಿಯಾಗಿದ್ದರು.
ಇನ್ನೊಂದೆಡೆ, ಅಸ್ಸಾಂನಲ್ಲಿ ಮತ್ತು ಮೇಘಾಲಯದಲ್ಲಿ ಸೋಮವಾರ 24 ಗಂಟೆಗಳ ಅವಧಿಯಲ್ಲಿ 3.4 ತೀವ್ರತೆಯಲ್ಲಿ ಭೂಮಿಯು ಎರಡು ಬಾರಿ ಕಂಪಿಸಿದೆ. ಯಾವುದೇ ಸಾವು ನೋವು, ಆಸ್ತಿಪಾಸ್ತಿ ಹಾನಿ ವರದಿಯಾಗಿಲ್ಲ.
ಡಿಕೋಕ್‌ಚೆರ್ರಾ ರೈಲು ನಿಲ್ದಾಣದಲ್ಲಿ ಮಳೆ ಹಾಗೂ ಪ್ರವಾಹದಿಂದ ಹಳಿಗಳು ಮುಳುಗಡೆಯಾಗಿದ್ದು, ನೂರಾರು ಮಂದಿ ನಿಲ್ದಾಣದಲ್ಲೇ ಸಿಲುಕುವಂತಾಗಿದೆ. ಈ ಹಿನ್ನೆಲೆಯಲ್ಲಿ 119 ಪ್ರಯಾಣಿಕರನ್ನು ವಾಯುಪಡೆ ಹೆಲಿಕಾಪ್ಟರ್‌ಗಳ ಮೂಲಕ ಏರ್‌ಲಿಫ್ಟ್ ಮಾಡಲಾಗಿದೆ. ಪ್ರವಾಹದಿಂದಾಗಿ ರಸ್ತೆಗಳು, ಸೇತುವೆ, ನೀರಾವರಿ ಕಾಲುವೆಗಳು ಹಾನಿಗೀಡಾಗಿವೆ.
ಹಿಮಾಚಲದಲ್ಲೂ ಮಳೆ:
ಹಿಮಾಚಲ ಪ್ರದೇಶದಲ್ಲೂ ಮಳೆ ಅಬ್ಬರಿಸತೊಡಗಿದ್ದು, ಬುಧವಾರದವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರುಣಾಚಲ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹವಾಮಾನ ವೈಪರೀತ್ಯ: ಪರಿಸ್ಥಿತಿ ವಿಕೋಪಕ್ಕೆ
ಒಂದೇ ದೇಶ. ಆದರೆ, ಒಂದು ಕಡೆ ಮಳೆ-ಪ್ರವಾಹ, ಮತ್ತೊಂದು ಕಡೆ ಬಿಸಿಗಾಳಿ, ಮಗದೊಂದು ಕಡೆ ಭೂಕುಸಿತ. ಇದು ಭಾರತದಲ್ಲಿ ಹೆಚ್ಚುತ್ತಿರುವ ಹವಾಮಾನ ವೈಪರೀತ್ಯದ ಚಿತ್ರಣ.
ದೆಹಲಿಯಲ್ಲಿ ಬಿಸಿಲಿನ ಝಳವು 49 ಡಿ.ಸೆ. ದಾಟಿದ್ದರೆ, ದಕ್ಷಿಣದ ರಾಜ್ಯಗಳಲ್ಲಿ ಮಳೆ ತಾಂಡವವಾಡುತ್ತಿದೆ, ಈಶಾನ್ಯದಲ್ಲಿ ಪ್ರವಾಹ, ಭೂಕುಸಿತವು ಜನಜೀವನವನ್ನು ತತ್ತರಿಸಿದೆ. ಮುಂದಿನ ದಿನಗಳಲ್ಲಿ ಭಾರತವು ಇಂತಹ ಮತ್ತಷ್ಟು ವೈಪರೀತ್ಯಗಳಿಗೆ ಸಾಕ್ಷಿಯಾಗಲಿದೆ ಎಂದು ಪರಿಸರ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಅಸ್ಸಾಂ ಭೂಕುಸಿತದಿಂದ ಮೃತಪಟ್ಟವರು- 3
ಪ್ರವಾಹದಿಂದ ನಿರ್ವಸಿತರಾದವರು – 57,000
ಜಲಾವೃತಗೊಂಡ ಗ್ರಾಮಗಳು- 222
ಮುಳುಗಿದ ಕೃಷಿ ಭೂಮಿ- 10,321.44 ಹೆಕ್ಟೇರ್
ಹಾನಿಗೀಡಾದ ಮನೆಗಳು – 200
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.