ಸರ್ಕಾರದ ಮೇಲೆ ತೀವ್ರ ಒತ್ತಡ: ಇಂದಿನಿಂದ ಈ ರಾಜ್ಯಗಳಲ್ಲಿ ಮದ್ಯಮಾರಾಟ ಆರಂಭ

Team Udayavani, Apr 13, 2020, 8:08 AM IST

liqour-shops-india

ಅಸ್ಸಾಂ: ದೇಶಾದ್ಯಂತ ಕೋವಿಡ್-19 ಭೀತಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಸಾವಿನ ಪ್ರಮಾಣ ಮತ್ತು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮುಂಜಾಗೃತ ಕ್ರಮವಾಗಿ ಹಲವು ದೇಶಗಳಲ್ಲಿ ಲಾಕ್ ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಏತನ್ಮಧ್ಯೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಇಂದಿನಿಂದ (ಸೋಮವಾರ) ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ ಮದ್ಯಮಾರಾಟ ಅಂಗಡಿಗಳು, ಸಗಟು ಮಾರಾಟ ಕೇಂದ್ರಗಳು, ಮದ್ಯ ತಯಾರಿಕಾ ಘಟಕಗಳು ಹಾಗೂ ಬಾಟಲಿಂಗ್ ಘಟಕಗಳು ಇಂದಿನಿಂದ ಪ್ರತಿನಿತ್ಯ ಏಳು ಗಂಟೆ ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಮೇಘಾಲಯದಲ್ಲಿ ಕೂಡ ಬೆಳಗ್ಗೆ 9 ರಿಂದ ಸಂಜೆ 4ರವರೆಗೂ ಮದ್ಯಮಾರಾಟ ಮಾಡಲಾಗುವುದು. ಈ ವೇಳೆ ಸಾಮಾಜಿಕ ಅಂತರ, ಮತ್ತು ಶುಚಿತ್ವ ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅನುಮತಿ ನೀಡಿರುವ ದಿನದಂದು ಮದ್ಯದಂಗಡಿಗಳು ಬೆಳಗ್ಗೆ 10 ರಿಂದ ಸಂಜೆ 5ರವರೆಗೂ ಮಾತ್ರ ತೆರೆದಿರಲಿವೆ.  ಈ ಸಂದರ್ಭದಲ್ಲಿ ಬೆರಳೆಣಿಕೆಯ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸಬೇಕು. ಮಾತ್ರವಲ್ಲದೆ  ಬಾಟಲ್ ಹಾಗೂ ನಗದು ಮುಟ್ಟುವಾಗ ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಮಾಡಬೇಕು ಎಂದು ಅಸ್ಸಾಂ ಅಬಕಾರಿ ಇಲಾಖೆ ಸೂಚನೆ ನೀಡಿದೆ.

ಸರ್ಕಾರದ ಮದ್ಯ ಮಾರಾಟ ಮಾಡಲು ಅವಕಾಶ ನೀಡಿರುವ ಆದೇಶವನ್ನು ಮೇಘಾಲಯದ ಅಬಕಾರಿ ಇಲಾಖೆ ಆಯುಕ್ತರಾದ ಪ್ರವೀಣ್ ಬಕ್ಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಮದ್ಯ ಮಾರಾಟ ಅಂಗಡಿಗಳನ್ನು ತೆರಯುವಂತೆ ಮೇಘಾಲಯದಲ್ಲಿ ಸರ್ಕಾರದ ಮೇಲೆ ತೀವ್ರ ಒತ್ತಡವಿದೆ. ಈವರೆಗೂ ಈ ರಾಜ್ಯದಲ್ಲಿ ಯಾವುದೇ ಕೋವಿಡ್ 19 ಸೋಂಕು ಪ್ರಕರಣ ದಾಖಲಾಗಿಲ್ಲ. ಬಿಜೆಪಿ ಸೇರಿದಂತೆ ಆಡಳಿತರೂಢ ಪಕ್ಷ ಮೈತ್ರಿ ಪಕ್ಷಗಳು ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ  ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 29 ಸೋಂಕು ಪ್ರಕರಣಗಳು ವರದಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಅಸ್ಸಾ ಹಾಗೂ ಮೇಘಾಲಯದಂತೆ ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.