ಅಸ್ಸಾಂ : ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು 8 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಅಸ್ಸಾಂನ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಘಟನೆ
Team Udayavani, Aug 3, 2022, 9:13 AM IST
ಅಸ್ಸಾಂ : ಅಸ್ಸಾಂನ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ರೈಲು ನಿಲ್ದಾಣದಲ್ಲಿ ಓವರ್‌ಹೆಡ್ ಶೆಡ್‌ನ ಕೆಳಗೆ ಕೂಲಿಕಾರ್ಮಿಕರ ಗುಂಪೊಂದು ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಬೊಂಗೈಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ತಿಳಿಸಿದ್ದಾರೆ.
“ಓವರ್ ಹೆಡ್ ಶೆಡ್ ಅಳವಡಿಸುವಾಗ ಸಮತೋಲನ ಕಳೆದುಕೊಂಡು ಮೇಲ್ಛಾವಣಿ ಕುಸಿದು ಬಿದ್ದಿದೆ ಈ ವೇಳೆ ಒಟ್ಟು ಎಂಟು ಕಾರ್ಮಿಕರು ಗಾಯಗೊಂಡಿದ್ದರು. ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಐವರು ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ : ಮೂಡುಬಿದಿರೆ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಪ್ರಯಾಣಿಕರು ಪಾರು
Assam | Eight labourers got injured after an under-construction roof collapsed at Bongaigaon railway station yesterday
Of the 8 injured, three are in serious condition and have been admitted to a private hospital: Swapnaneel Deka, SP Bongaigaon pic.twitter.com/vgGOH6SzLR
— ANI (@ANI) August 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.