48 ಜನಪ್ರತಿನಿಧಿಗಳ ವಿರುದ್ಧ ಮಹಿಳಾ ದೌರ್ಜನ್ಯ ಕೇಸು
Team Udayavani, Apr 20, 2018, 9:18 AM IST
ಹೊಸದಿಲ್ಲಿ: ಜಗತ್ತಿನಾದ್ಯಂತ ಉನ್ನಾವ್ ಮತ್ತು ಕಥುವಾ ಅತ್ಯಾಚಾರ ಪ್ರಕರಣಗಳು ಪ್ರತಿಧ್ವನಿಸುತ್ತಿರುವಂತೆಯೇ, ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಕೇಸು ಹೊತ್ತ 48 ಮಂದಿ ರಾಜಕಾರಣಿಗಳು ನಮ್ಮ ಶಾಸನ ಸಭೆಗಳಲ್ಲಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಸೋಸಿಯೇಶನ್ ಆಫ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ಸಿದ್ಧಪಡಿಸಿರುವ ವರದಿ ಅನ್ವಯ, 45 ಶಾಸಕರು ಮತ್ತು 3 ಸಂಸದರ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣ ದಾಖಲಾಗಿವೆ. ಒಟ್ಟು 1,580 ಸಂಸದರು ಮತ್ತು ಶಾಸಕರು ನಾಮಪತ್ರ ಸಲ್ಲಿಸುವಾಗ ನಮೂದಿಸಿದ್ದ ಕೇಸುಗಳನ್ನು ಪರಿಶೀಲಿಸಿದ ಬಳಿಕ ಈ ಅಂಶ ಬಯಲಾಗಿದೆ.
ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಹೊತ್ತ ಪಕ್ಷಗಳಲ್ಲಿ ಬಿಜೆಪಿಗೇ ಮೊದಲ ಸ್ಥಾನವಿದೆ. ಬಿಜೆಪಿಯ ಒಟ್ಟು 12 ಮಂದಿ ಶಾಸಕ ಮತ್ತು ಸಂಸದರು ಇಂಥ ಆರೋಪ ಹೊತ್ತಿದ್ದಾರೆ. ಎರಡನೇ ಸ್ಥಾನದಲ್ಲಿ ಶಿವಸೇನೆ(7), ಮೂರನೇ ಸ್ಥಾನದಲ್ಲಿ ತೃಣಮೂಲ ಕಾಂಗ್ರೆಸ್(6), ನಾಲ್ಕರಲ್ಲಿ ತೆಲುಗು ದೇಶಂ (5), ಕಾಂಗ್ರೆಸ್(4)ಐದನೇ ಸ್ಥಾನದಲ್ಲಿದೆ. ಅವರ ವಿರುದ್ಧ ಮಹಿಳೆ ಮೇಲೆ ಹಲ್ಲೆ, ಅಪಹರಣ, ಬಲವಂತ ವಿವಾಹ, ಅತ್ಯಾಚಾರ, ಕೌಟುಂಬಿಕ ಹಿಂಸೆ, ಮಾನವ ಕಳ್ಳಸಾಗಾಣಿಕೆ ಪ್ರಕರಣಗಳು ದಾಖಲಾಗಿವೆ.
ಕರ್ನಾಟಕದಿಂದ ಒಬ್ಬರು: ಭಟ್ಕಳದ ಪಕ್ಷೇತರ ಶಾಸಕ ಮಾಂಕಾಳ, ವೈದ್ಯ ಮಹಿಳೆ ಮೇಲೆ ಹಲ್ಲೆ ಸಂಬಂಧ ಕೇಸು ದಾಖಲಾಗಿದೆ. ಇವರನ್ನು ಬಿಟ್ಟರೆ ಬೇರಾವ ಜನಪ್ರತಿನಿಧಿಗಳ ಮೇಲೂ ಮಹಿಳಾ ದೌರ್ಜನ್ಯ ಕೇಸು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.