ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರ ಸ್ವೀಕಾರ
Team Udayavani, Jul 4, 2021, 7:35 PM IST
ಉತ್ತರಾಖಂಡ : ಕೊನೆಗೂ ಉತ್ತರಾಖಂಡದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ ಸಿಕ್ಕಿದೆ. ಬಿಜೆಪಿಯ ಖತಿಮಾ ಶಾಸಕ ಪುಷ್ಕರ್ ಸಿಂಗ್ ಧಾಮಿ ಇಂದು (ಭಾನುವಾರ, ಜುಲೈ 4) ಉತ್ತರಾಖಂಡದ 11 ನೇ ಮುಖ್ಯಮಂತ್ರಿಯಾಗಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಿರತ್ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಧಾಮಿ ತಮ್ಮ 45 ನೇ ವಯಸ್ಸಿನಲ್ಲಿ ಉತ್ತರಾಖಂಡದ 11 ನೇ ಮುಖ್ಯಮಂತ್ರಿಯಾಗಿದ್ದಲ್ಲದೇ, ರಾಜ್ಯದ ಮೊದಲ ಅತ್ಯಂತ ಕಿರಿಯ ಮುಖ್ಯಮಂತ್ರಿ ಎನ್ನುವುದಕ್ಕೆ ಪಾತ್ರರಾಗಿದ್ದಾರೆ .
ಇಂದು ನಡೆದ ಪ್ರಮಾನ ವಚನ ಸ್ವೀಕಾರ ಸಮಾರಂಭದಲ್ಲಿ ಧನ್ ಸಿಂಗ್ ರಾವತ್, ರೇಖಾ ಆರ್ಯ ಮತ್ತು ಸ್ವಾಮಿ ಯತಿಶ್ವರಾನಂದ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಹೊಸ ರಾಜ್ಯ ಸಚಿವ ಸಂಪುಟದಲ್ಲಿ ಬಿಶನ್ ಸಿಂಗ್ ಚುಫಾಲ್, ಸುಬೋಧ್ ಯುನಿಯಲ್, ಅರವಿಂದ್ ಪಾಂಡೆ, ಸತ್ಪಾಲ್ ಮಹಾರಾಜ್, ಹರಾಕ್ ಸಿಂಗ್ ರಾವತ್, ಬನ್ಸಿಧರ್ ಭಗತ್, ಮತ್ತು ಗಣೇಶ್ ಜೋಶಿ ಮತ್ತು ಇನ್ನಿಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
उत्तराखंड प्रदेश के मुख्यमंत्री के रूप में दी गई जिम्मेदारी लिए मैं माननीय प्रधानमंत्री श्री @narendramodi , पार्टी अध्यक्ष श्री @JPNadda जी, केंद्रीय गृहमंत्री श्री @AmitShah जी और राष्ट्रीय नेतृत्व व प्रदेश नेतृत्व का हृदय की गहराइयों से आभार प्रकट करता हूं। pic.twitter.com/sWU4ofkUbz
— Pushkar Singh Dhami (@pushkardhami) July 4, 2021
ಇದನ್ನೂ ಓದಿ : ಕೋವಿಡ್:ಬಾಗಲಕೋಟೆ-ಯಾದಗಿರಿಯಲ್ಲಿಂದು ಶೂನ್ಯ ಪ್ರಕರಣ; ರಾಜ್ಯದಲ್ಲಿ ಪತ್ತೆಯಾದ ಕೇಸ್ ಎಷ್ಟು ?
ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉತ್ತರಾಖಂಡದ ನೂತನ ಮುಖ್ಯಮಂತ್ರಿ ಧಾಮಿ, “ನಾನು ಯುವಕರ ಪರವಾಗಿ ಕೆಲಸ ಮಾಡುತ್ತಿದ್ದೇನೆ. ಯುವಕರ ಸಮಸ್ಯೆಗಳನ್ನು ನಾನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ. ಕೋವಿಡ್ ನಂತಹ ಪರಿಸ್ಥಿತಿ ಯುವಕರ ಜೀವನೋಪಾಯದ ಮೇಲೆ ದೊಡ್ಡ ಪರಿಣಾಮ ಬೀರಿದೆ. ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಹತೆಗನುಗುಣವಾಗಿ ಯುವಕರನ್ನು ನೇಮಿಸಿಕೊಳ್ಳುವ ಪ್ರಯತ್ನವನ್ನೂ ಕೂಡ ಮಾಡುತ್ತೇನೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ದುಡಿಯುತ್ತೇನೆ ಎಂದು ಹೇಳಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಸೇರಿ ಹಲವು ಪ್ರಮುಖ ನಾಯಕರು ತಮ್ಮ ಅಧಿಕೃತ ಟ್ವೀಟರ್ ಮೂಲಕ ಶುಭಾಶಯ ಕೋರಿದ್ದಾರೆ.
Congratulations to Shri @pushkardhami and all others who took oath today. Best wishes to this team as they work towards the progress and prosperity of Uttarakhand.
— Narendra Modi (@narendramodi) July 4, 2021
ಡೆಹ್ರಾಡೂನ್‌ನ ರಾಜ್ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ಉತ್ತರಾಖಂಡ ಅಧ್ಯಕ್ಷ ಮದನ್ ಕೌಶಿಕ್ ಸೇರಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಶುಕ್ರವಾರ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ತಿರತ್ ಸಿಂಗ್ ರಾವತ್ ರಾಜ್ಯಪಾಲರಿಗೆ ರಾಜಿನಾಮೆಯನ್ನು ಸಲ್ಲಿಸಿದ್ದರು.
ಯಾರು ಪುಷ್ಕರ್ ಸಿಂಗ್ ಧಾಮಿ..?
ಸೆಪ್ಟೆಂಬರ್ 16, 1975 ರಂದು ಉತ್ತರಾಖಂಡದ ಪಿಥೋಗರ್ ಜನಿಸಿದ ಧಾಮಿ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಇಂಡಸ್ಟ್ರಿಯಲ್ ರಿಲೇಶನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿ ಸೇವೆಸಲ್ಲಿಸುತ್ತಿದ್ದ ಅವರು ಪ್ರಸ್ತುತ ಉತ್ತರಾಖಂಡದ 11 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಹಿನ್ನೆಲೆಯಿರುವ ಧಾಮಿ, 2002-2008ರವರೆಗೆ ಬಿಜೆಪಿಯ ಯುವ ವಿಭಾಗದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಯ ಉತ್ತರಾಖಂಡದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಉಧಮ್ ಸಿಂಗ್ ನಗರದ ಖತಿಮಾ ಕ್ಷೇತ್ರದ ಎರಡು ಬಾರಿ ಶಾಸಕರಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಇನ್ನು, 2001-2002ರವರೆಗೆ ಮಾಜಿ ರಾಜ್ಯ ಮುಖ್ಯಮಂತ್ರಿ ಭಗತ್ ಸಿಂಗ್ ಕೊಶಿಯಾರಿಗೆ ವಿಶೇಷ ಕರ್ತವ್ಯದ (ಒ ಎಸ್ ಡಿ) ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದರು.
ಇದನ್ನೂ ಓದಿ : UAE ನಲ್ಲಿ ನಡೆದ ರಾಫಲ್ ಡ್ರಾದಲ್ಲಿ 40 ಕೋಟಿ ರೂ.ಗೆದ್ದ ಕೇರಳದ ರಂಜಿತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.