ಭಾರತ-ಚೀನಾ ಗಡಿ ಗಲಾಟೆ: 20 ಭಾರತೀಯ ಯೋಧರು ಹುತಾತ್ಮ
ಚೀನಾ ಸೈನ್ಯದಲ್ಲೂ 42ಕ್ಕೂ ಹೆಚ್ಚು ಸೈನಿಕರ ಸಾವು
Team Udayavani, Jun 16, 2020, 10:18 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ತಿಕ್ಕಾಟ ತಾರಕ್ಕೇರುವ ಎಲ್ಲಾ ಲಕ್ಷಣಗಳೂ ಸ್ಪಷ್ಟವಾಗಿ ಗೋಚರಿಸುತ್ತಿವೆ.
ಲಢಾಕ್ ನ ಗಲ್ವಾನ್ ಕಣಿವೆ ಪ್ರದೇಶದಲ್ಲಿರುವ ನೈಜ ನಿಯಂತ್ರಣ ರೇಖೆಯ ಬಳಿ ಎರಡೂ ದೇಶಗಳ ಸೈನಿಕರ ನಡುವೆ ಪರಸ್ಪರ ಮೇಲಾಟ ನಡೆದು ಕನಿಷ್ಟ 20 ಜನ ಭಾರತೀಯ ಯೋಧರನ್ನು ಚೀನಾ ಸೈನಿಕರು ಕೊಂದಿದ್ದಾರೆ ಎಂಬ ಮಾಹಿತಿಯನ್ನು ಸರಕಾರದ ಮೂಲಗಳನ್ನುದ್ದೇಶಿಸಿ ಎ.ಎನ್.ಐ. ಸುದ್ದಿ ಸಂಸ್ಥೆ ವರದಿ ಮಾಡಿದೆ.
ಓರ್ವ ಕರ್ನಲ್ ಸೇರಿದಂತೆ 20 ಭಾರತೀಯ ಯೋಧರು ಈ ಘಟನೆಯಲ್ಲಿ ಹುತಾತ್ಮರಾಗಿದ್ದಾರೆ.
ಇದೇ ಸಂದರ್ಭದಲ್ಲಿ ಚೀನಾ ಕಡೆಯಲ್ಲೂ ಸಾವುನೋವುಗಳಿಂಟಾಗಿದ್ದು ಕನಿಷ್ಟ 43 ಚೀನಾ ಯೋಧರು ಸಾವನ್ನಪ್ಪಿರುವ ಮಾಹಿತಿ ಲಭಿಸಿರುವುದಾಗಿ ಎ.ಎನ್.ಐ. ವರದಿ ಮಾಡಿದೆ.
ಇದನ್ನೂ ಓದಿ: ಭಾರತೀಯ ಸೇನೆ ಪ್ರತೀಕಾರಕ್ಕೆ ಎಷ್ಟು ಮಂದಿ ಚೀನಾ ಸೈನಿಕರು ಸಾವನ್ನಪ್ಪಿದ್ದಾರೆ ಗೊತ್ತಾ?
ಇದಕ್ಕೂ ಮೊದಲು ಇಂದು ಬೆಳಿಗ್ಗೆ ಹೇಳಿಕೆ ನೀಡಿದ್ದ ಭಾರತೀಯ ಸೇನೆಯ ಅಧಿಕಾರಿಗಳು ಚೀನಾ ಸೈನಿಕರೊಂದಿಗೆ ಲಢಾಕ್ ಪ್ರದೇಶದಲ್ಲಿ ನಡೆದ ಘರ್ಷಣೆಯಲ್ಲಿ ಸೇನೆಯ ಓರ್ವ ಅಧಿಕಾರಿ ಹಾಗೂ ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿಯನ್ನು ನೀಡಿತ್ತು.
ನೈಜ ಗಡಿ ನಿಯಂತ್ರಣ ರೆಖೆಯ ಪ್ರದೇಶದಲ್ಲಿ ‘ಯಥಾ ಸ್ಥಿತಿ’ಯನ್ನು ಬದಲಿಸುವ ಚೀನಾದ ದು:ಸ್ಸಾಹಸದಿಂದ ಈ ಘರ್ಷಣೆ ಉಂಟಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆಯ ಮೂಲಗಳು ಆರೋಪಿಸಿವೆ.
ಆದರೆ ಭಾರತೀಯ ಸೈನಿಕರೇ ಪದೇ ಪದೇ ಗಡಿ ಪ್ರದೇಶದ ಉಲ್ಲಂಘನೆ ಮಾಡುತ್ತಿದ್ದಾರೆಂದು ಚೀನಾ ಆರೋಪಿಸುತ್ತಿದೆ.
1975ರ ಬಳಿಕ ಭಾರತ ಹಾಗೂ ಚೀನಾ ನಡುವೆ ಗಡಿಭಾಗದಲ್ಲಿ ಉಂಟಾಗುತ್ತಿರುವ ಪ್ರಥಮ ಘರ್ಷಣೆ ಇದಾಗಿದೆ. ಆ ಕಾಲಕ್ಕೂ ಇಂದಿಗೂ ಎರಡೂ ದೇಶಗಳ ಸೇನಾ ಸಾಮರ್ಥ್ಯದಲ್ಲಿ ಗಣನೀಯ ವೃದ್ಧಿಯಾಗಿದ್ದು ಜಾಗತಿಕ ಮಟ್ಟದಲ್ಲೂ ಚೀನಾ ಹಾಗೂ ಭಾರತ ನಿರ್ಣಾಯಕ ಸ್ಥಾನದಲ್ಲಿರುವುದರಿಂದ ಈ ಎರಡೂ ನೆರೆ ರಾಷ್ಟ್ರಗಳ ನಡುವಿನ ಗಡಿ ಗಲಾಟೆ ಇದೀಗ ವಿಶ್ವದ ಕಳವಳಕ್ಕೆ ಕಾರಣವಾಗಿದೆ.
At least 20 Indian soldiers killed in the violent face-off with China in Galwan valley in Eastern Ladakh. Casualty numbers could rise: Government Sources pic.twitter.com/PxePv8zGz4
— ANI (@ANI) June 16, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.