ಹಿಮಾಚಲ ಪ್ರದೇಶ: ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ಅನಹುತ, 5 ಬಲಿ
Team Udayavani, Jul 23, 2018, 11:11 AM IST
ಮಂಡಿ, ಹಿಮಾಚಲ ಪ್ರದೇಶ : ಇಲ್ಲಿನ ವಸತಿ ಕಟ್ಟಡದಲ್ಲಿ ಇಂದು ಸೋಮವಾರ ಬೆಳಗ್ಗೆ ಭೀಕರ ಅಗ್ನಿ ಅನಾಹುತ ಸಂಭವಿಸಿ ಐವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕಟ್ಟಡದೊಳಗೆ ಇನ್ನೂ ಅನೇಕರು ಸಿಕ್ಕಿ ಹಾಕಿಕೊಂಡಿರುವುದಾಗಿ ಶಂಕಿಸಲಾಗಿದ್ದು ಅವರನ್ನು ಪಾರು ಗೊಳಿಸುವ ಕಾರ್ಯಾಚರಣೆ ಇದೀಗ ಜಾರಿಯಲ್ಲಿದೆ ಎಂದು ವರದಿಗಳು ತಿಳಿಸಿವೆ.
ಮಂಡಿ ನಗರದ ನೇರ್ ಚೌಕ್ ಪ್ರದೇಶದಲ್ಲಿನ ವಸತಿ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆಯೇ ಅದು ಭೀಕರ ಸ್ವರೂಪವನ್ನು ತಳೆಯಿತು. ಪರಿಣಾಮವಾಗಿ ಐವರನ್ನು ಅದು ಬಲಿ ಪಡೆಯಿತು. ಸುದ್ದಿ ತಿಳಿದಾಕ್ಷಣವೇ ಅಗ್ನಿ ಶಾಮಕಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೀವ್ ಕುಮಾರ್ ತಿಳಿಸಿದರು.
ಕಟ್ಟಡದೊಳಗೆ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿರುವುದನ್ನು ಶಂಕಿಸಲಾಗಿದೆ. ಇದರಿಂದಾಗಿಯೇ ಈ ಭೀಕರ್ ಅಗ್ನಿ ಅನಾಹುತ ಸಂಭವಿಸಿರಬೇಕೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.