Tragedy: ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದವರ ಕಾರು ಪಲ್ಟಿ, 6 ಮೃತ್ಯು, ಪಾರಾದ ಮಕ್ಕಳು
Team Udayavani, Feb 5, 2024, 12:30 PM IST
ಕಾನ್ಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಪಲ್ಟಿಯಾದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ.
ಮದುವೆ ಸಮಾರಂಭದ ಪೂರ್ವಭಾವಿಯಾಗಿ ನಡೆದ ತಿಲಕ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಕಾನ್ಪುರದ ಶಿವರಾಜಪುರಕ್ಕೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯ ಜಗನ್ನಾಥಪುರ ಗ್ರಾಮದ ಬಳಿ ಮಳೆ ಹಾಗೂ ದಟ್ಟ ಮಂಜಿನಿಂದ ಆವರಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಪಲ್ಟಿಯಾಗಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಅಲ್ಲದೆ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದಾರೆ ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದು ಗಾಯಗೊಂಡ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಆರು ಮಂದಿ ದೇರಾಪುರ ಮತ್ತು ಶಿವರಾಜಪುರ ನಿವಾಸಿಗಳು ಎಂದು ಗುರುತಿಸಲಾಗಿದೆ.
ಸಿಎಂ ಯೋಗಿ ಸಂತಾಪ :
ಕಾನ್ಪುರ ದೇಹತ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಮುಖ್ಯಮಂತ್ರಿ ಯೋಗಿ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Shocking… ಬುರ್ಖಾ ಧರಿಸಿ ತಂಗಿಯ ಮದುವೆಗೆಂದು ಮಾಡಿಟ್ಟ ಆಭರಣಗಳನ್ನೇ ದೋಚಿದ ಅಕ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.