ಕೊನೇ ಹಂತ ಶೇ.61 ಮತದಾನ
ಪಶ್ಚಿಮ ಬಂಗಾಳ, ಪಂಜಾಬ್‌ನಲ್ಲಿ ಹಿಂಸಾಚಾರ
Team Udayavani, May 20, 2019, 6:00 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿರುವ ವಾರಾಣಸಿ ಕ್ಷೇತ್ರ ಸೇರಿದಂತೆ 8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಭಾನುವಾರ ಮತದಾನ ಪೂರ್ಣಗೊಂಡಿದ್ದು, 38 ದಿನಗಳ ಕಾಲ ನಡೆದ ಲೋಕಸಭಾ ಮತ ಸಮರಕ್ಕೆ ಪೂರ್ಣವಿರಾಮ ಬಿದ್ದಿದೆ. 7ನೇ ಹಾಗೂ ಕೊನೇ ಹಂತದಲ್ಲಿ ಶೇ.61 ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ದೇಶಾದ್ಯಂತದ 542 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆದಿದ್ದು, ಸುಮಾರು 8 ಸಾವಿರ ಅಭ್ಯರ್ಥಿಗಳ ಭವಿಷ್ಯವು ವಿದ್ಯುನ್ಮಾನ ಮತಯಂತ್ರಗಳಲ್ಲಿ ಭದ್ರವಾಗಿವೆ. ಮೇ 23ರಂದು ಇವರೆಲ್ಲರ ಭವಿಷ್ಯವೂ ಬಹಿರಂಗವಾಗಲಿದೆ.
ಪ್ರತಿಯೊಂದು ಹಂತದಲ್ಲೂ ಹಿಂಸಾಚಾರವನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ಭಾನುವಾರವೂ ಭಾರಿ ಹಿಂಸಾಚಾರ ನಡೆದಿದೆ. ಟಿಎಂಸಿ ಹಾಗೂ ಬಿಜೆಪಿ ಅಭ್ಯರ್ಥಿಗಳ ಕಾರುಗಳ ಮೇಲೆ ಬಾಂಬ್ ದಾಳಿ, ಕಲ್ಲು-ಇಟ್ಟಿಗೆ ತೂರಾಟದಂಥ ಘಟನೆಗಳು ನಡೆದಿವೆ. ಇನ್ನು ಪಂಜಾಬ್‌ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗುಂಡು ಹಾರಿಸಿರುವ ಸಂಗತಿಯೂ ಬೆಳಕಿಗೆ ಬಂದಿದೆ.
ಪ್ರಸಕ್ತ ಲೋಕಸಭಾ ಚುನಾವಣೆ ವೇಳೆ ಒಟ್ಟಾರೆ 3,449.12 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ. 2014ಕ್ಕೆ ಹೋಲಿ ಸಿದರೆ ಈ ಪ್ರಮಾಣ 3 ಪಟ್ಟು ಅಧಿಕ. ಹಿಂದಿನ ಚುನಾವಣೆಯಲ್ಲಿ 1,206 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.