ಯುಪಿಯ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ಕನಿಷ್ಠ 8 ಮಂದಿ ಸಾವು
Team Udayavani, Jun 4, 2022, 6:49 PM IST
ಹಾಪುರ್: ಪಶ್ಚಿಮ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಭವಿಸಿದಾಗ ರಾಷ್ಟ್ರ ರಾಜಧಾನಿಯಿಂದ 80 ಕಿಮೀ ದೂರದಲ್ಲಿರುವ ಧೋಲಾನಾದಲ್ಲಿನ ಯುಪಿಎಸ್‌ಐಡಿಸಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ 25 ಜನರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕೆಲವು ಕಾರ್ಖಾನೆಗಳ ಮೇಲ್ಛಾವಣಿಗಳು ಹಾನಿಗೊಳಗಾಗಿವೆ. ಕಾರ್ಖಾನೆಯಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳಕ್ಕೆ ಮೂರು ಗಂಟೆ ಬೇಕಾಯಿತು.
ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ (ಮೀರತ್ ಶ್ರೇಣಿ) ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಉಳಿದ 17 ಜನರಲ್ಲಿ 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರ್ಖಾನೆಯು ಸಿಎನ್‌ಜಿ ಪಂಪ್‌ನ ಪಕ್ಕದಲ್ಲಿದೆ. ಅಧಿಕಾರಿಗಳ ಪ್ರಕಾರ ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕ್ರಮಗಳು ಮುಂದುವರೆದಿದೆ.
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. “ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ” ಎಂದು ಸಿಎಂ ಕಚೇರಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.