Caste census; ಎಷ್ಟು ಮಂದಿ ದಲಿತರಿದ್ದೀರಿ?:ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಿಗೆ ರಾಹುಲ್
ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಕಾಂಗ್ರೆಸ್ ಬೆಂಬಲಿಸಲಿದೆ... ಸಿಎಂ ಸಿದ್ದರಾಮಯ್ಯ ಭಾಗಿ
Team Udayavani, Oct 9, 2023, 8:23 PM IST
ಹೊಸದಿಲ್ಲಿ: ರಾಷ್ಟ್ರವ್ಯಾಪಿ ಜಾತಿ ಗಣತಿಯ ಕಲ್ಪನೆಯನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯು(CWC) ಸರ್ವಾನುಮತದಿಂದ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ, ಇದು ಬಡವರ ವಿಮೋಚನೆಗೆ ಶಕ್ತಿಯುತ ಹೆಜ್ಜೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದರು
ಸೋಮವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದುರ್ಬಲ ವರ್ಗದ ಜನರು ದೇಶದ ಆಸ್ತಿ ಮತ್ತು ಸಂಸ್ಥೆಗಳಲ್ಲಿ ತಮ್ಮ ಪಾಲು ಪಡೆಯುತ್ತಿಲ್ಲ ಎಂದರು. ಮಾತ್ರವಲ್ಲದೆ ಇಲ್ಲಿ ಎಷ್ಟು ಮಂದಿ ದಲಿತರು ಮತ್ತು ಒಬಿಸಿಗಳು ಇದ್ದೀರಿ ಎಂದು ಪ್ರಶ್ನಿಸಿ ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರಿಗೆ ಕೈ ಎತ್ತಲು ಹೇಳಿದರು.
ದೇಶದ ಆಸ್ತಿ ಮತ್ತು ಸಂಸ್ಥೆಗಳಲ್ಲಿ ಸಂಸ್ಥೆಗಳಲ್ಲಿ ಎಷ್ಟು ದಲಿತರು, ಬುಡಕಟ್ಟು ಜನಾಂಗದವರು ಮತ್ತು OBC ಗಳು ಇದ್ದಾರೆ, ಅವರ ಸಂಪತ್ತು ಏನು, ಆಸ್ತಿಯಲ್ಲಿ ಪಾಲು ಮತ್ತು ಅವರ ಜನಸಂಖ್ಯೆ ಎಷ್ಟು ಎಂಬುದು ಪ್ರಶ್ನೆಯಾಗಿದೆ ಎಂದರು.
ಜಾತಿ ಗಣತಿ ಬೇಡಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆಗಳ ವಿರುದ್ಧ ಆಕ್ರೋಶ ಹೊರ ಹಾಕಿ “ದೇಶದಲ್ಲಿ ಎಷ್ಟು ಬಡವರು ಇದ್ದಾರೆ ಎಂದು ನಾವು ಕೇಳುತ್ತಿದ್ದೇವೆ. ಆದ್ದರಿಂದ ಬಿಜೆಪಿ ಟೀಕೆ ಕೇವಲ ಗೊಂದಲ ಹುಟ್ಟಿಸಲು ಮಾತ್ರ ಎಂದರು.
ಸಿಎಂ ಸಿದ್ದರಾಮಯ್ಯ ಸೇರಿ ನಾಲ್ಕು ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳ ಜತೆಗಿದ್ದ ರಾಹುಲ್ ಗಾಂಧಿ, ಜಾತಿ ಜನಗಣತಿಯನ್ನು ಬೆಂಬಲಿಸುವ CWC ನಿರ್ಧಾರವು ಬಡ ಜನರ ವಿಮೋಚನೆಗಾಗಿ “ಅತ್ಯಂತ ಪ್ರಗತಿಪರ” ಮತ್ತು “ಶಕ್ತಿಯುತ” ಹೆಜ್ಜೆಯಾಗಿದೆ. ದೇಶದಲ್ಲಿ ಹೊಸ ಮಾದರಿ ಮತ್ತು ಅಭಿವೃದ್ಧಿಗೆ ಈ ‘ಎಕ್ಸ್-ರೇ’ ಅಗತ್ಯವಿದೆ ಎಂದರು.
4 ಕಾಂಗ್ರೆಸ್ ಮುಖ್ಯಮಂತ್ರಿಗಳ ಪೈಕಿ 3 ಮುಖ್ಯಮಂತ್ರಿಗಳು ಒಬಿಸಿಯವರು. ಬಿಜೆಪಿಯ 10 ಮುಖ್ಯಮಂತ್ರಿಗಳ ಪೈಕಿ 1 ಮುಖ್ಯಮಂತ್ರಿ ಒಬಿಸಿ ಆಗಿದ್ದು, ಕೆಲ ದಿನಗಳ ನಂತರ ಅವರೂ ಮುಖ್ಯಮಂತ್ರಿಯಾಗಿರುವುದಿಲ್ಲ.ಪ್ರಧಾನಿ ಮೋದಿ ಒಬಿಸಿಗಾಗಿ ಕೆಲಸ ಮಾಡುವುದಿಲ್ಲ, ಅವರು ಒಬಿಸಿ ವರ್ಗದ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ ಎಂದು ರಾಹುಲ್ ಆರೋಪಿಸಿದರು.
ಜಾತಿ ಗಣತಿ ವರದಿ ಖಂಡಿತ ಪ್ರಕಟಿಸುತ್ತೇವೆ
2014-15 ರಲ್ಲಿ, ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಗಣತಿ ಮತ್ತು ಎಲ್ಲಾ ಸಮುದಾಯಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ವಹಿಸಲಾಯಿತು. ನಮ್ಮ ಸರ್ಕಾರದ ಅವಧಿ ಮುಗಿಯುವ ಹೊತ್ತಿಗೆ ವರದಿ ಸಿದ್ಧವಾಗಿರಲಿಲ್ಲ. ಈಗ ಕಾಯಂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ವರದಿ ಸಲ್ಲಿಸುವಂತೆ ಮನವಿ ಮಾಡಿದ್ದೇವೆ. ಅದನ್ನು ಕಾಂಗ್ರೆಸ್ ಸರ್ಕಾರ ಖಂಡಿತ ಪ್ರಕಟಿಸುತ್ತದೆ ಎಂದು ಸಭೆಯಲ್ಲಿ ಹಾಜರಿದ್ದ ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.