Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?
Team Udayavani, Sep 17, 2024, 11:51 AM IST
ನವದೆಹಲಿ: ಅಬಕಾರಿ ನೀತಿ ಹಗರಣ ಮತ್ತು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ನಂತರ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಇದೀಗ ಮಂಗಳವಾರ (ಸೆ.17) ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಿ ಅತಿಶಿ ಮರ್ಲೆನಾ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವಂತೆ ಕೇಜ್ರಿವಾಲ್ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ದೆಹಲಿಯ ಕಲ್ಕಾಜಿ ಕ್ಷೇತ್ರದ ಆಪ್ ಶಾಸಕಿ ಅತಿಶಿಯನ್ನು ದೆಹಲಿ ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ನಿರ್ಧಾರ ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಿ, ಶಿಕ್ಷಣ ಸಚಿವೆ ಅತಿಶಿ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದು, ಇದಕ್ಕೆ ಶಾಸಕರು ಸಹಮತ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
ಸೆಪ್ಟೆಂಬರ್ 15ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದು, ಎರಡು ದಿನಗಳ ಬಳಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಹೆಸರನ್ನು ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.