1993 ರ ಮಾದರಿ ದಾಳಿಯ ಬೆದರಿಕೆ : ಎಟಿಎಸ್ ನಿಂದ ಓರ್ವನ ಬಂಧನ
Team Udayavani, Jan 8, 2023, 4:49 PM IST
ಮುಂಬಯಿ: ಪೊಲೀಸರಿಗೆ ಕರೆ ಮಾಡಿ ನಗರದಲ್ಲಿ 1993 ರ ಮಾದರಿಯ ಸರಣಿ ಬಾಂಬ್ ಸ್ಫೋಟಗಳ ಬೆದರಿಕೆಯೊಡ್ಡಿದ ಒಂದು ದಿನದ ನಂತರ, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಓರ್ವನನ್ನು ಭಾನುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಸಂಜೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಎರಡು ತಿಂಗಳ ನಂತರ ಮಾಹಿಮ್, ಭೆಂಡಿ ಬಜಾರ್, ನಾಗ್ಪಾಡಾ, ಮದನ್‌ಪುರ ಮತ್ತು ಇತರ ಪ್ರದೇಶಗಳಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಲಿವೆ. ಕೋಮು ಗಲಭೆಗಳನ್ನು ನಡೆಸಲು ವಿವಿಧ ರಾಜ್ಯಗಳ ಜನರನ್ನು ಮುಂಬೈಗೆ ಕರೆಸಲಾಗಿದೆ ಎಂದು ಬೆದರಿಕೆ ಹಾಕಿದ್ದ ಎಂದು ಎಟಿಎಸ್ ಅಧಿಕಾರಿ ತಿಳಿಸಿದ್ದಾರೆ.
ಕರೆ ಮಾಡಿದವರನ್ನು ಪತ್ತೆಹಚ್ಚಲು ಎಟಿಎಸ್ ಎರಡು ವಿಶೇಷ ತಂಡಗಳನ್ನು ರಚಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆತನನ್ನು ಮಲಾಡ್‌ನ ಉಪನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ.
ಆರೋಪಿಯ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ದೌರ್ಜನ್ಯ, ಭೂಕಬಳಿಕೆ ಸೇರಿದಂತೆ 12 ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾರ್ಚ್ 12, 1993 ರಂದು ಮುಂಬೈನಲ್ಲಿ ಕನಿಷ್ಠ 12 ಬಾಂಬ್ ಸ್ಫೋಟಗಳು ಸಂಭವಿಸಿ, 257 ಜನರು ಅಸುನೀಗಿದ್ದರು ಮತ್ತು ಕನಿಷ್ಠ 1,400 ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.