ನೀಟ್ ಕೋಚಿಂಗ್ ಸೆಂಟರ್ ಮೇಲೆ ದಾಳಿ: 30 ಕೋಟಿ ರೂ. ವಶ
Team Udayavani, Oct 14, 2019, 6:01 AM IST
ಚೆನ್ನೈ: ತಮಿಳುನಾಡಿನ ನಮಕ್ಕಲ್ ಸೇರಿದಂತೆ ಹಲವೆಡೆ ನೀಟ್ ಕೋಚಿಂಗ್ ಸೆಂಟರ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ 30 ಕೋಟಿ ರೂ. ವಶಪಡಿಸಿ ಕೊಂಡಿದೆ. ಕಾಂಗ್ರೆಸ್ ನಾಯಕರಾಗಿರುವ ಡಾ| ಜಿ.ಪರಮೇಶ್ವರ್, ಆರ್.ಎಲ್.ಜಾಲಪ್ಪನವರಿಗೆ ಸೇರಿದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವಂತೆಯೇ ಈ ಬೆಳವಣಿಗೆ ನಡೆದಿದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ತೆರಿಗೆ ವಂಚನೆ ಮೂಲಕ ಕೋಚಿಂಗ್ ಸೆಂಟರ್‌ಗಳು ಅಪಾರ ಮೊತ್ತ ಸಂಗ್ರಹಿಸಿವೆ. ಸದ್ಯಕ್ಕೆ 30 ಕೋಟಿ ರೂ.ವಶಪಡಿಸಿಕೊಳ್ಳಲಾಗಿದೆ. ಸರಿಯಾಗಿ ಲೆಕ್ಕಾಚಾರ ಹಾಕಿದರೆ ವಂಚನೆ ಮೊತ್ತ 150 ಕೋಟಿ ರೂ. ದಾಟಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ನಮಕ್ಕಲ್, ಕರೂರ್, ಚೆನ್ನೈ, ಪೆರುಂದುರೈಗಳಲ್ಲಿ Ã ುವ ಕೋಚಿಂಗ್ ಸೆಂಟರ್‌ನ 17 ಸ್ಥಳಗಳ ಮೇಲೆ ದಾಳಿ ನಡೆಸಲಾಗಿತ್ತು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ. ನಗದು ರೂಪದಲ್ಲಿ ಶುಲ್ಕ ಸ್ವೀಕರಿಸಿ, ಅದರ ಬಗ್ಗೆ ಸರಿಯಾದ ರೀತಿಯಲ್ಲಿ ಲೆಕ್ಕ ಇರಿಸಿಕೊಳ್ಳಲಾಗುತ್ತಿರಲಿಲ್ಲ. ಶೋಧ ಕಾರ್ಯಾಚರಣೆ ವೇಳೆ ಡೈರಿಗಳಲ್ಲಿನ ಉಲ್ಲೇಖಗಳು, ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ದಾಖಲೆ ಸಂರಕ್ಷಿಸಿ ಇರಿಸಿದ್ದು ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.