ಕುಂದಾಪುರದಲ್ಲಿ ಗೋ ಕಳ್ಳಸಾಗಾಟ ಪತ್ತೆ: ಪೇದೆಯ ಹತ್ಯೆಗೆ ಯತ್ನ
Team Udayavani, Oct 17, 2017, 10:13 AM IST
ಕುಂದಾಪುರ: ಇಲ್ಲಿನ ಕಂಡ್ಲೂರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ತಡೆದ ಪೊಲೀಸ್ ಪೇದೆಯೊಬ್ಬರ ಮೇಲೆ ವಾಹನ ಹತ್ತಿಸಿ ಹತ್ಯೆಗೈಯಲು ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ.
ಪಿಕ್ಅಪ್ ವಾಹನ ದಲ್ಲಿ ಸುಮಾರು 25 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ತಡೆದಿದ್ದಾರೆ.
ಪೇದೆ ಪ್ರಶಾಂತ್ ನಾಗಣ್ಣ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ವಾಹನದಲ್ಲಿದ್ದ 10ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ.
ಉಡುಪಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.