ತೆರಿಗೆ ಜಾಲ ವಿಸ್ತರಣೆಗೆ ಗಮನ ಹರಿಸಿ: ಪ್ರಧಾನಿ
Team Udayavani, May 3, 2017, 11:10 AM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೆ ಕ್ಷಿಪ್ರಗತಿಯ ಹೆಜ್ಜೆ ಇಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಳಧನಕ್ಕೆ ಬ್ರೇಕ್ ಹಾಕುವುದು ಹಾಗೂ ತೆರಿಗೆ ಸಂಬಂಧಿತ ವಿಚಾರಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ತೆರಿಗೆ ಪಾವತಿ ಮಾಡುವ ಜನರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ, ಇ- ಅಸೆಸ್‌ಮೆಂಟ್ ಅನ್ನು ಹೆಚ್ಚಿನ ಸಂಖ್ಯೆಯಲ್ಲಿ ಜಾರಿ ಮಾಡುವ ಬಗ್ಗೆಯೂ ಪ್ರಧಾನಿ ಒತ್ತು ನೀಡಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಸಚಿವಾಲಯದ ಆದಾಯ ಕಾರ್ಯದರ್ಶಿ ಹಸು¾ಖ್ ಆದಿಯಾ ಸೇರಿ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. 500, 1000 ರೂ. ಮುಖಬೆಲೆಯ ನೋಟುಗಳ ನಿಷೇಧ ಬಳಿಕ ಈವರೆಗೆ ಆಗಿರುವ ತೆರಿಗೆ ಸಂಗ್ರಹ ಮತ್ತು ತೆರಿಗೆ ಕ್ಷಮಾಧಾನ ಯೋಜನೆಯಡಿಯಲ್ಲಿ ಲಾಭ ಪಡೆದುಕೊಂಡಿರುವ ಅಂಶಗಳ ಬಗ್ಗೆ ಹಾಗೂ ಕಪ್ಪು ಹಣಕ್ಕೆ ಬ್ರೇಕ್ ಹಾಕುವ ತಮ್ಮ ಪ್ರಯತ್ನದ ಅನುಷ್ಠಾನಧಿಗಳಿಗೆ ಸಂಬಂಧಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಈ ವಿಚಾರವಾಗಿ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಆದಾಯ ತೆರಿಗೆ ಇಲಾಖೆಯಿಂದ ಕೂಲಂಕಶ ಅಂಶ ಗಳನ್ನು ಹೊಂದಿರುವ ವರದಿಯನ್ನು ತರಿಸಿಕೊಂಡು ಚರ್ಚಿಸಿರುವ ಪ್ರಧಾನಿ ಮೋದಿ, ಈ ಬಗ್ಗೆ ಮುಂದಿನ ನಡೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ರಾಷ್ಟ್ರಾದ್ಯಂತ ನಡೆದ ಐಟಿ ದಾಳಿ ಹಾಗೂ ದಾಳಿಯಲ್ಲಿ ವಶಪಡಿಸಿಕೊಳ್ಳಲಾದ ದಾಖಲೆಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.