ಔರಂಗಜೇಬ್ ಸಮಾಧಿಗೆ 5 ದಿನಗಳ ಕಾಲ ಪ್ರವೇಶವಿಲ್ಲ: ಅಜಿತ್ ಪವಾರ್
ಗೋರಿ ಕೆಡವಬೇಕು ಎಂದು ಎಂಎನ್ಎಸ್ ಒತ್ತಾಯ
Team Udayavani, May 19, 2022, 12:21 PM IST
ಮುಂಬಯಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು 5 ದಿನಗಳ ಕಾಲ ಮುಚ್ಚಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗುರುವಾರ ಹೇಳಿದ್ದಾರೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಓವೈಸಿ ಇತ್ತೀಚೆಗೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿರುವ ಸಮಾಧಿಗೆ ಭೇಟಿ ನೀಡಿದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಇದರ ನಂತರ, ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಓವೈಸಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದರು. ಓವೈಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಉದ್ಧವ್ ಠಾಕ್ರೆ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ಮೇ 20ರವರೆಗೆ ವಿಚಾರಣೆ ಬೇಡ- ವಾರಾಣಸಿ ಕೋರ್ಟ್ ಗೆ ಸುಪ್ರೀಂ
ಎರಡು ದಿನಗಳ ಹಿಂದೆಯಷ್ಟೇ ಎಂಎನ್ಎಸ್ ವಕ್ತಾರ ಗಜಾನನ ಕಾಳೆ ಅವರು ಸಮಾಧಿಯ ಅಸ್ತಿತ್ವವನ್ನು ಪ್ರಶ್ನಿಸಿ ಗೋರಿ ಕೆಡವಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಅವರ ಬೆದರಿಕೆಯನ್ನು ಅನುಸರಿಸಿ, ಸ್ಥಳೀಯ ಮಸೀದಿ ಸಮಿತಿಯು ಪ್ರದೇಶವನ್ನು ಲಾಕ್ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಅನ್ನು ಸಂಪರ್ಕಿಸಿತ್ತು. ಆ ಹಿನ್ನೆಲೆಯಲ್ಲಿ ಎಎಸ್ಐ ಅಧಿಕಾರಿಗಳು ಐದು ದಿನಗಳ ಕಾಲ ಸ್ಥಳವನ್ನು ಮುಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.