ರಾಮ ಮಂದಿರ: ಭೂಮಿ ಪೂಜೆಗೆ ಇರುವುದು ಕೇವಲ 32 ಸೆಕಂಡ್ ಗಳ ಶುಭ ಮುಹೂರ್ತ
175 ಜನರಿಗೆ ಆಹ್ವಾನ, ವೇದಿಕೆಯಲ್ಲಿ ಐವರಿಗೆ ಮಾತ್ರ ಸ್ಥಾನ
Team Udayavani, Aug 4, 2020, 12:06 PM IST
ಹೊಸದಿಲ್ಲಿ: ದೇಶವೇ ಕಾತರದಿಂದ ಕಾಯುತ್ತಿರುವ ರಾಮ ಮಂದಿರ ಭೂಮಿ ಪೂಜೆ ನಾಳೆ ( ಆ. 5) ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಭರ್ಜರಿ ಸಿದ್ದತೆಗಳು ನಡೆಯುತ್ತಿದೆ.
ರಾಮ ಮಂದಿರ ಭೂಮಿ ಪೂಜೆ ಪೂರ್ವ ಸಿದ್ದತೆಯಾಗಿ ಸೊಮವಾರ 21 ಅರ್ಚಕರು ವಿಘ್ನವಿನಾಶಕ ಗಣಪತಿ ಪೂಜೆ ನಡೆಸಿದ್ದಾರೆ. ಇಂದು ಅಯೋಧ್ಯೆಯ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ.
ಭೂಮಿ ಪೂಜೆ ಕಾರ್ಯಕ್ರಮದ ಮೇಲ್ವಿಚಾರಣೆ ಹೊತ್ತಿರುವ ಅರ್ಚಕ ವೃಂದದವರು ಭೂಮಿ ಪೂಜೆಗೆ ಶುಭ ಮುಹೂರ್ತ ನಿಗಧಿ ಮಾಡಿದ್ದು, ಬುಧವಾರ ಮಧ್ಯಾಹ್ನ ಕೇವಲ 32 ಸೆಕಂಡ್ ಗಳ ಕಾಲ ಉತ್ತಮ ಮುಹೂರ್ತವಿದೆ ಎಂದಿದ್ದಾರೆ. ಅಂದರೆ ಮಧ್ಯಾಹ್ನ 12.44.08 ರಿಂದ 12.44.40ರ ವರೆಗೆ ಉತ್ತಮ ಮುಹೂರ್ತವಿದೆ ಎಂದು ಅರ್ಚಕರು ತಿಳಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
175 ಜನರಿಗೆ ಆಹ್ವಾನ
ನಾಳೆಯ ಭೂಮಿ ಪೂಜೆ ಕಾರ್ಯಕ್ರಮಕ್ಕೆ ದೇಶಾದ್ಯಂತ 175 ಜನರಿಗೆ ಆಹ್ವಾನ ನೀಡಲಾಗಿದೆ. ಇದರಲ್ಲಿ 135 ಮಂದಿ ವಿವಿಧ ಸಾಧು ಸಂತರು, ಸ್ವಾಮೀಜಿಗಳು ಇರಲಿದ್ದಾರೆ.
ಕಾರ್ಯಕ್ರಮದ ವೇದಿಕೆಯಲ್ಲಿ ಐವರು ಇರಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಮಹಾರಾಜ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೇದಿಕೆಯಲ್ಲಿರಲಿದ್ದಾರೆ.
ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ. ಬುಧವಾರದ ಕಾರ್ಯಕ್ರಮವನ್ನು ಅವರು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಇದು ನವ ಭಾರತಕ್ಕೆ ಅಡಿಪಾಯ ಎಂದು ಆದಿತ್ಯನಾಥ್ ವ್ಯಾಖ್ಯಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.