ಆನ್‌ಲೈನ್‌ನಲ್ಲೇ ದೃಢೀಕರಣ
Team Udayavani, Oct 28, 2018, 6:00 AM IST
ನವದೆಹಲಿ: ಇನ್ನು ಮುಂದೆ ಪಾಸ್ ಪೋರ್ಟ್‌ಗೆ ಅರ್ಜಿ ಸಲ್ಲಿಸಿದವರು ಪೊಲೀಸ್ ದೃಢೀಕರಣಕ್ಕಾಗಿ ದಿನಗಟ್ಟಲೆ ಕಾಯುವ, ಅಲೆಯುವ ಸಮಸ್ಯೆ ಇರುವುದಿಲ್ಲ. ಏಕೆಂದರೆ, ಸದ್ಯದಲ್ಲೇ ಆನ್‌ಲೈನ್‌ನಲ್ಲೇ ಪೊಲೀಸ್ ವೆರಿಫಿಕೇಷನ್ ಸೌಲಭ್ಯ ಜಾರಿಯಾಗಲಿದೆ. ಇದಿಷ್ಟೇ ಅಲ್ಲ, ಚಾಲಕನನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ, ಬಾಡಿಗೆದಾರನಿಗೆ ಮನೆ ನೀಡುವಾಗ, ಕೆಲಸದಾಳುಗಳನ್ನು ನೇಮಿಸಿಕೊಳ್ಳುವಾಗ ಅವರ ಹಿನ್ನೆಲೆ ಅಥವಾ ಪೊಲೀಸ್ ದೃಢೀಕರಣ ಮಾಡಬೇಕಿದ್ದರೆ, ಆ ಕೆಲಸವೂ ಆನ್‌ಲೈನ್‌ನಲ್ಲೇ ನಡೆಯಲಿದೆ. ಅಪರಾಧಗಳು ಮತ್ತು ಅಪರಾಧಿಗಳ ದತ್ತಾಂಶಗಳನ್ನು ಸಂಗ್ರಹಿಸಿಟ್ಟಿರುವಂಥ ಸಿಸಿಟಿಎನ್‌ಎಸ್(ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಆ್ಯಂಡ್ ಸಿಸ್ಟಮ್ಸ್) ಇಂಥ ಆನ್‌ಲೈನ್ ಸೇವೆಗಳನ್ನು ಒದಗಿಸಲು ಮುಂದಾಗಿದೆ.
ಇದರ ಜೊತೆಗೆ, ಕಾರು ಕಳವು ದೂರುಗಳ ನೋಂದಣಿ, ಎಫ್ಐಆರ್ ಪ್ರತಿ ಪಡೆಯುವುದು, ಎಫ್ಐಆರ್ ಸ್ಥಿತಿಗತಿ ಅರಿಯುವುದು ಮತ್ತಿತರ ಸೇವೆಗಳನ್ನೂ ಸಿಸಿಟಿಎನ್‌ಎಸ್ ಆನ್‌ಲೈನ್ ಮೂಲಕ ಒದಗಿಸಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ) ಉಪನಿರ್ದೇಶಕ ಪ್ರಶೂನ್ ಗುಪ್ತಾ ತಿಳಿಸಿದ್ದಾರೆ.
ಸಿಸಿಟಿಎನ್ ಬಗ್ಗೆ: 26/11ರ ಮುಂಬೈ ದಾಳಿ ಬಳಿಕ ಅಂದಿನ ಗೃಹ ಸಚಿವ ಪಿ.ಚಿದಂಬರಂ ಅವರು 2009ರಲ್ಲಿ ಸಿಸಿಟಿಎನ್ ಅನ್ನು ಸ್ಥಾಪಿಸಿದರು. ಇದರಲ್ಲಿ ದೇಶಾದ್ಯಂತದ ಅಪರಾಧ, ಅಪರಾಧಿಗಳ ದತ್ತಾಂಶಗಳಿದ್ದು, ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್‌ಗಳು, ತನಿಖೆ, ಆರೋಪಪಟ್ಟಿಗೆ ಸಂಬಂಧಿಸಿದ ಮಾಹಿತಿಗಳೂ ಇದರಲ್ಲಿವೆ. ಸಿಬಿಐ, ಗುಪ್ತಚರ ಇಲಾಖೆ, ಎನ್‌ಐಎ, ಜಾರಿ ನಿರ್ದೇಶನಾಲಯ ಮತ್ತು ಮಾದಕದ್ರವ್ಯ ನಿಯಂತ್ರಣ ಬ್ಯೂರೋಗಳು ಕೂಡ ಈ ದತ್ತಾಂಶಗಳನ್ನು ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.