PM Modi: ಪ್ರಧಾನಿ ಮೋದಿ ಹುಟ್ಟುಹಬ್ಬ; 1000 ಚಾಲಕರಿಂದ ರಿಯಾಯಿತಿ ದರದಲ್ಲಿ ಆಟೋ ಸೇವೆ
ಕೆಲ ಆಟೋ ಚಾಲಕರಿಂದ ಉಚಿತ ಆಟೋ ಸೇವೆ
Team Udayavani, Sep 17, 2023, 9:42 AM IST
ಗುಜರಾತ್: ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ರಾಜಕೀಯ ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಮೋದಿ 73ನೇ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದ್ದಾರೆ. ಬಿಜೆಪಿ ಪಕ್ಷ ಹಾಗೂ ಕಾರ್ಯಕರ್ತರು ತನ್ನ ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ವಿವಿಧ ಸಾಮಾಜಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.
ಇತ್ತ ಗುಜರಾತ್‌ನ ಸೂರತ್‌ನಲ್ಲಿ ಸುಮಾರು 1,000 ಆಟೋ ಚಾಲಕರು ಪಿಎಂ ಮೋದಿ ಅವರ ಹುಟ್ಟುಹಬ್ಬಕ್ಕೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ಆಟೋ ಸೇವೆ ನೀಡಲು ಮುಂದಾಗಿದ್ದಾರೆ.
ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಈ ಘೋಷಣೆ ಮಾಡಿದ್ದು, ಆಟೋ ರಿಕ್ಷಾ ಚಾಲಕರ ಉದಾರ ಕಾರ್ಯಕ್ಕೆ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
“1,000 ಆಟೋ ರಿಕ್ಷಾ ಚಾಲಕರು ಪ್ರಧಾನಿ ಮೋದಿಯವರ ಜನ್ಮದಿನದಂದು ಶೇಕಡಾ 30 ರಷ್ಟು ರಿಯಾಯಿತಿಯನ್ನು ಘೋಷಿಸಿದ್ದಾರೆ. ಪ್ರಧಾನಿ ಮೋದಿಯವರ 73 ನೇ ಹುಟ್ಟುಹಬ್ಬದಂದು ಶೇಕಡಾ 100 ರಷ್ಟು ರಿಯಾಯಿತಿಯನ್ನು ನೀಡುತ್ತಿರುವ 73 ಆಟೋ ರಿಕ್ಷಾ ಚಾಲಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಬಿಜೆಪಿ ನಾಯಕ ಹೇಳಿರುವುದಾಗಿ ಎಎನ್ ಐ ವರದಿ ಮಾಡಿದೆ.
ಆಟೋ ಚಾಲಕರಲ್ಲಿ ಸಾವಿರ ಮಂದಿ ಶೇ.30 ರಷ್ಟು ರಿಯಾಯಿತಿ ನೀಡುವುದಾಗಿ ಹೇಳಿದ್ದು, 73 ಆಟೋ ಚಾಲಕರು ಮೋದಿ ಹುಟ್ಟುಹಬ್ಬದಂದು ಒಂದು ಪೈಸೆಯನ್ನು ತೆಗೆದುಕೊಳ್ಳದೇ ಇಡೀ ದಿನ ಗ್ರಾಹಕರಿಗೆ ಉಚಿತವಾಗಿ ಆಟೋ ಸೇವೆ ನೀಡುವುದಾಗಿ ಹೇಳಿದ್ದಾರೆ.
ಪ್ರಧಾನ ಮಂತ್ರಿಯವರ ಜನ್ಮದಿನದಂದು, ಬಿಜೆಪಿಯು ‘ಸೇವಾ ಪಖ್ವಾರಾ’ ಎಂಬ ಎರಡು ವಾರಗಳ ಅಭಿಯಾನವನ್ನು ಆರಂಭಿಸಲಿದೆ. ಈ ಸಂದರ್ಭದಲ್ಲಿ ಸದಸ್ಯರು ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು ಮತ್ತು ಆರೋಗ್ಯ ಶಿಬಿರಗಳಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಡೆಯಲಿದೆ.
ಇನ್ನು ಪ್ರಧಾನಿ ಮೋದಿ ಅವರು ತಮ್ಮ ಹುಟ್ಟುಹಬ್ಬದಂದು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ “ಪಿಎಂ ವಿಶ್ವಕರ್ಮ” ಯೋಜನೆಗೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.