ಕಾಶ್ಮೀರದ ಆಯೆಷಾ ಅಜೀಜ್ ದೇಶದ ಕಿರಿಯ ಪೈಲಟ್
Team Udayavani, Feb 4, 2021, 7:55 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆಯೆಷಾ ಅಜೀಜ್ (25) ದೇಶದ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2011ರಲ್ಲಿ ಅವರು ವಿದ್ಯಾರ್ಥಿ ಪೈಲಟ್ ಆಗಿದ್ದದ್ದು ಮಾತ್ರವಲ್ಲ ರಷ್ಯಾದ ಸೊಕೊಲ್ ವಾಯುನೆಲೆಯಲ್ಲಿ ಮಿಗ್29 ಯುದ್ಧ ವಿಮಾನವನ್ನು ಹಾರಿಸುವ ಪರವಾನಿಗೆ ಪಡೆದುಕೊಂಡಿದ್ದರು. ಈ ಬೆಳವಣಿಗೆ ಕೇಂದ್ರಾಡಳಿತ ಪ್ರದೇಶದಲ್ಲಿ ಮಹಿಳೆಯರಿಗೆ ಸ್ಫೂರ್ತಿ ನೀಡುವ ವಿಚಾರವಾಗಿದೆ. 2017ರಲ್ಲಿ ಆಯೆಷಾ ಅವರು, ಬಾಂಬೆ ಫ್ಲಯಿಂಗ್ ಕ್ಲಬ್ (ಬಿಎಫ್ಸಿ)ನಲ್ಲಿ ವಾಯು ಯಾನ ಕ್ಷೇತ್ರದಲ್ಲಿ ಪದವಿ ಪಡೆದುಕೊಂಡಿದ್ದರು ಮತ್ತು ವಾಣಿಜ್ಯಿಕ ವಿಮಾನಗಳನ್ನು ಹಾರಿಸುವ ಬಗ್ಗೆ ಪರವಾನಿಗೆಯನ್ನೂ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡಲು ಕ್ರಮ: ಕೆ.ಎಸ್. ಈಶ್ವರಪ್ಪ
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಯೆಷಾ “ಕಾಶ್ಮೀರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಹೆಚ್ಚಿನವರು ಸ್ನಾತಕೋತ್ತರ ಪದವಿ, ವಿವಿಧ ಕ್ಷೇತ್ರಗಳಲ್ಲಿ ಪಿಎಚ್.ಡಿ ನಡೆಸುತ್ತಿದ್ದಾರೆ. ನನಗೆ ಪ್ರಯಾಣ ಮಾಡುವುದು ಇಷ್ಟವಾಗಿದ್ದರಿಂದ ಈ ಕ್ಷೇತ್ರ ಆರಿಸಿಕೊಂಡೆ’ ಎಂದು ಹೇಳಿದ್ದಾರೆ. ಹೆತ್ತವರು ಮತ್ತು ಕುಟುಂಬ ಸದಸ್ಯರು ತಮಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.