ಅಯೋಧ್ಯೆ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಗೆ ನಕಾರ
Team Udayavani, Apr 7, 2018, 10:10 AM IST
ಹೊಸದಿಲ್ಲಿ: ಅಯೋಧ್ಯೆಯ ಭೂವಿವಾದ ಪ್ರಕರಣವು ಮುಸ್ಲಿಮರಲ್ಲಿ ಜಾರಿಯಲ್ಲಿರುವ ಬಹು ಪತ್ನಿತ್ವಕ್ಕಿಂತಲೂ ಮುಖ್ಯವಾದದ್ದು. ಹಾಗಾಗಿ, ಇದನ್ನು ಸುಪ್ರೀಂ ಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು. ಹೀಗೆಂದು ಹಿರಿಯ ನ್ಯಾಯವಾದಿ ರಾಜೀವ್ ಧವನ್ ಶುಕ್ರವಾರ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠಕ್ಕೆ ಮನವಿ ಮಾಡಿದ್ದಾರೆ. ಆದರೆ, ಇವರ ಕೋರಿಕೆಯನ್ನು ನ್ಯಾಯಪೀಠ ವಜಾ ಮಾಡಿದ್ದು, ಪ್ರಕರಣದ ಇತರ ಅರ್ಜಿದಾರರ ವಾದಗಳನ್ನು ಆಲಿಸಿದ ಬಳಿಕವಷ್ಟೇ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಮುಸ್ಲಿಂ ಅರ್ಜಿದಾರರ ಪರ ವಾದಿಸಿದ ರಾಜೀವ್ ಧವನ್ ಅವರು, ‘ಅಯೋಧ್ಯೆ ವಿವಾದವು ಬಹು ಪತ್ನಿತ್ವಕ್ಕಿಂತಲೂ ಹೆಚ್ಚು ಮಹತ್ವವುಳ್ಳದ್ದು ಮತ್ತು ಇಡೀ ದೇಶವೇ ಈ ಬಗ್ಗೆ ಉತ್ತರಕ್ಕಾಗಿ ಕಾಯುತ್ತಿದೆ. ಹಾಗಾಗಿ, ವಿಚಾರಣೆಯನ್ನು ವಿಸ್ತೃತ ಪೀಠವೇ ನಡೆಸಬೇಕು’ ಎಂದು ಕೋರಿದರು. ಆದರೆ, ಇದಕ್ಕೆ ನ್ಯಾಯಪೀಠ ಸಮ್ಮತಿಸಲಿಲ್ಲ. ಅಯೋಧ್ಯೆ ವಿವಾದ ಕುರಿತು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ 14 ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.