ಅಯೋಧ್ಯೆ ರೀತಿಯೇ “ಅಯ್ಯಪ್ಪ ದೇಗುಲ’ ತೀರ್ಪು?
Team Udayavani, Nov 10, 2019, 5:02 AM IST
ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಪ್ರಕಟಿಸಿರುವ ತೀರ್ಪಿನ ರೀತಿಯೇ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಮರು ಪರಿಶೀಲನೆ ಪ್ರಕರಣದಲ್ಲೂ ತೀರ್ಪು ಹೊರ ಬರುವ ಸಾಧ್ಯತೆ ಇದೆ ಎಂದು ರಾಮಲಲ್ಲಾ ಪರ ವಕೀಲರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ ವಿಷಯದಲ್ಲಿ ಜಾಗದ ಮಾಲಕತ್ವಕ್ಕಿಂತ ರಾಮನಿದ್ದಾನೆ ಎಂಬ ಹಿಂದೂಗಳ ಭಾವನೆಗಳನ್ನು ಪರಿಗಣಿಸಿರುವುದನ್ನು ಕಾಣಬಹುದು. ನಂಬಿಕೆಗಳನ್ನು ಪ್ರಶ್ನೆ ಮಾಡಲು ಸಾಧ್ಯ ವಿಲ್ಲ.. ಇದೇ ಮಾದರಿಯಲ್ಲಿ ಅಯ್ಯಪ್ಪ ದೇಗುಲದ ವಿಷಯದಲ್ಲೂ ತೀರ್ಪು ಹೊರಬರಲಿದೆ ಎಂದು ವಕೀಲ ಕೆ.ಎನ್. ಭಟ್ ತಿಳಿಸಿದ್ದಾರೆ.
ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಅರ್ಜಿಯ ವಾದದಲ್ಲಿ ನಂಬಿಕೆಯೇ ಪ್ರಧಾನವಾಗಿದೆ. ಆದರೆ, ಈ ವಾದವನ್ನು ಕಳೆದ ವರ್ಷ ನ್ಯಾಯಾಲಯ ಸ್ವೀಕರಿಸಲಿಲ್ಲ. ಮಹಿಳೆ ಯರ ಪ್ರವೇಶವನ್ನು ನಿರ್ಬಂಧಿಸಿರುವುದಕ್ಕೆ ವೈಜ್ಞಾನಿಕ ಕಾರಣಗಳು ಇರುವುದಿಲ್ಲ. ಭಕ್ತರ ಭಾವನೆ ಹಾಗೂ ನಂಬಿಕೆಗಳು ಮುಖ್ಯವಾಗಿರುತ್ತವೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿದ್ದ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠವು, ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.